ಹಲ್ದ್ವಾನಿ: ಅಕ್ರಮವಾಗಿ ನಿರ್ಮಿಸಲಾಗಿದ್ದ ಮದರಸಾ ಮತ್ತು ಮಸೀದಿಯನ್ನು ತೆರವುಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿ ಹಿಂಸಾಚಾರ ಭುಗಿಲೆದ್ದಿದ್ದ ಉತ್ತರಖಂಡದ ಬನ್‌ಭೂಲ್‌ಪುರ ಪ್ರದೇಶದಲ್ಲಿ ಏಳು ದಿನಗಳ ಬಳಿಕ ಗುರುವಾರ ಕರ್ಫ್ಯೂ ಸಡಿಲಿಸಲಾಗಿದೆ.
ಗೌಜಾಜಾಲಿ, ರೈಲ್ವೆ ಬಜಾರ್ ಮತ್ತು ಎಫ್‌ಸಿಐ ಗೋದಾಮು ಪ್ರದೇಶದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4ರ ವರೆಗೆ ಕರ್ಫ್ಯೂ ಸಡಿಲಿಸಲಾಗಿದೆ ಎಂದು ನೈನಿತಾಲ್ ಜಿಲ್ಲಾಧಿಕಾರಿ ವಂದನಾ ಸಿಂಗ್ ಆದೇಶದಲ್ಲಿ ತಿಳಿಸಿದ್ದಾರೆ.
ಬನ್‌ಭೂಲ್‌ಪುರದ ಇತರ ಪ್ರದೇಶಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮಾತ್ರ ಕರ್ಫ್ಯೂ ಸಡಿಲಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.
ಫೆಬ್ರುವರಿ 8ರಂದು ಭುಗಿಲೆದ್ದಿದ್ದ ಹಿಂಸಾಚಾರದಲ್ಲಿ ಆರು ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.