ADVERTISEMENT

ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ: ಯುಪಿ DCM ಪಾಠಕ್

ಪಿಟಿಐ
Published 4 ಆಗಸ್ಟ್ 2024, 13:23 IST
Last Updated 4 ಆಗಸ್ಟ್ 2024, 13:23 IST
<div class="paragraphs"><p>ಬ್ರಿಜೇಶ್‌ ಪಾಠಕ್‌</p></div>

ಬ್ರಿಜೇಶ್‌ ಪಾಠಕ್‌

   

@brajeshpathakup

ಬಲ್ಲಿಯಾ( ಉತ್ತರ ಪ್ರದೇಶ): ಅಯೋಧ್ಯೆಯ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕದ ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಲಾಗುವುದು. ಈ ಮೂಲಕ ಅವರ ಮುಂದಿನ ತಲೆಮಾರಿನ ಜನರಿಗೆ ಈ ಶಿಕ್ಷೆಯು ನೆನಪಿನಲ್ಲಿ ಉಳಿಯಲಿದೆ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಿಜೇಶ್‌ ಪಾಠಕ್‌ ಭಾನುವಾರ ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಇತ್ತೀಚೆಗೆ ಆರೋಪಿಗಳಿಗೆ ಡಿಎನ್‌ಎ ಪರೀಕ್ಷೆ ಮಾಡಿಸಬೇಕೆಂದು ಸಮಾಜವಾದಿ ಪಕ್ಷ ಹೇಳಿಕೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪಾಠಕ್‌, ಆರೋಪಿಗಳು ಸಮಾಜವಾದಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದು, ಗೂಂಡಾಗಿರಿ ಮತ್ತು ಅರಾಜಕತೆ ಸಮಾಜವಾದಿ ಪಕ್ಷದವರ ‘ಡಿಎನ್‌ಎ‘ಯಲ್ಲಿದೆ ಎಂದು ಆರೋಪಿಸಿದ್ದಾರೆ.

ಪ್ರಕರಣದ ಸೂಕ್ಷ್ಮತೆಯನ್ನು ಪರಿಗಣಿಸಿ ಅತ್ಯಾಚಾರ ಸಂತ್ರಸ್ತೆಗೆ ರಕ್ಷಣೆ ನೀಡುವಂತೆ ನ್ಯಾಯಾಲಯ ಆದೇಶಿಸಬೇಕು. ಸಂತ್ರಸ್ತೆಗೆ ವೈದ್ಯಕೀಯ ನೆರವು ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅಖಿಲೇಶ್‌ ಯಾದವ್‌ ಹೇಳಿದ್ದರು.

ಮೊಯಿದ್ ಖಾನ್ ಸಮಾಜವಾದಿ ಪಕ್ಷದ ಸದಸ್ಯರಾಗಿದ್ದು, ಫೈಜಾಬಾದ್ ಸಂಸದ ಅವಧೇಶ್ ಪ್ರಸಾದ್ ಅವರೊಂದಿಗೆ ಗುರುತಿಸಿಕೊಂಡಿದ್ದಾನೆ. ಕೊಲೆಗಡುಕರಿಗೆ ಹಾಗೂ ಅತ್ಯಾಚಾರಿಗಳನ್ನು ಪೋಷಿಸುವುದು ಸಮಾಜವಾದಿ ಪಕ್ಷದ ಹಳೆ ಹವ್ಯಾಸವಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಆರೋಪಿಸಿದ್ದಾರೆ

ಮೊಯಿದ್ ಖಾನ್ ಮತ್ತು ಆತನ ಸಹಚರ ರಾಜು ಖಾನ್ ಎಂಬುವವರು ಎರಡು ತಿಂಗಳ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ವಿಡಿಯೊ ಚಿತ್ರೀಕರಣ ಮಾಡಿಕೊಂಡಿದ್ದರು. ವೈದ್ಯಕೀಯ ತಪಾಸಣೆ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಜುಲೈ 30ರಂದು ಅಯೋಧ್ಯೆಯ ಪುರಕಲಂದರ್ ಪ್ರದೇಶದಲ್ಲಿ ಮೊಯಿದ್ ಖಾನ್ ಮತ್ತು ರಾಜು ಖಾನ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಸಿಎಂ ಯೋಗಿ ಆದಿತ್ಯನಾಥ ಆದೇಶದ ಮೇರೆಗೆ ಅಯೋಧ್ಯೆ ಜಿಲ್ಲಾಡಳಿತವು ಅಕ್ರಮವಾಗಿ ನಿರ್ಮಿಸಿದ್ದ ಮೊಯಿದ್ ಖಾನ್ ಮಾಲೀಕತ್ವದ ಬೇಕರಿಯನ್ನು ನೆಲಸಮಗೊಳಿಸಿದೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.