ADVERTISEMENT

Haryana Election Voting 2024 Live: ಸಂಜೆ 5 ಗಂಟೆವರೆಗೆ ಶೇ 61ರಷ್ಟು ಮತದಾನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಅಕ್ಟೋಬರ್ 2024, 16:27 IST
Last Updated 5 ಅಕ್ಟೋಬರ್ 2024, 16:27 IST
<div class="paragraphs"><p>ಮತದಾನ</p></div>

ಮತದಾನ

   Kamal Kishore

ಹರಿಯಾಣ ವಿಧಾನಸಭೆ ಚುನಾವಣೆಗೆ ಮತದಾನ ಆರಂಭ

ಹರಿಯಾಣ ವಿಧಾನಸಭೆಯ ಎಲ್ಲಾ 90 ಕ್ಷೇತ್ರಗಳಿಗೆ ಮತದಾನ ಇಂದು (ಅ.5) ಬೆಳಿಗ್ಗೆ ಆರಂಭವಾಯಿಗಿದ್ದು ಮತದಾನಕ್ಕೆ ಸಂಬಂಧಪಟ್ಟ ಮಾಹಿತಿಯ ಕ್ಷಣ ಕ್ಷಣದ ಅಪ್ಡೇಟ್‌...

ವಿಧಾನಸಭೆ ಸ್ಪರ್ಧೆ ಮಾಡಿರುವ 1,031 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ರಾಜ್ಯದಾದ್ಯಂತ ಬಿಗಿ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ಪೋಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

2.04 ಕೋಟಿ ಮಂದಿ ಮತದಾರ...

ಒಟ್ಟು 2.04 ಕೋಟಿ ಮಂದಿ ಮತದಾರರಾಗಿ ನೋಂದಾಯಿಸಿಕೊಂಡಿದ್ದು, ಇದರಲ್ಲಿ 8,821 ಶತಾಯುಷಿಗಳೂ ಸೇರಿದ್ದಾರೆ ಎಂದು ಹರಿಯಾಣದ ಮುಖ್ಯ ಚುನಾವಣಾ ಅಧಿಕಾರಿ ಪಂಕಜ್ ಅಗರ್‌ವಾಲ್ ಮಾಹಿತಿ ನೀಡಿದ್ದಾರೆ.

ಒಲಂಪಿಕ್ಸ್‌ ಪದಕ ವಿಜೇತೆ ಮನು ಬಾಕರ್‌ ಮತದಾನ ಮಾಡಿದರು

1,031 ಅಭ್ಯರ್ಥಿಗಳ ಭವಿಷ್ಯ...

ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ, ಕುಸ್ತಿಪಟು ವಿನೇಶ್ ಫೋಗಟ್, ಜೆಜೆಪಿಯ ನಾಯಕ ದುಷ್ಯಂತ್ ಚೌಟಾಲಾ ಸೇರಿದಂತೆ ಒಟ್ಟು 1,031 ಅಭ್ಯರ್ಥಿಗಳ ಭವಿಷ್ಯವನ್ನು 2 ಕೋಟಿಗೂ ಅಧಿಕ ಮತದಾರರು ನಿರ್ಣಯಿಸಲಿದ್ದಾರೆ.

ಒಟ್ಟು 1,031 ಅಭ್ಯರ್ಥಿಗಳ ಪೈಕಿ 101 ಮಹಿಳೆಯರಿದ್ದು, 464 ಮಂದಿ ಸ್ವತಂತ್ರವಾಗಿ ಸ್ಪರ್ಧಿಸಿದ್ದಾರೆ. 20,632 ಮತಗಟ್ಟಗಳನ್ನು ಸ್ಥಾಪಿಸಲಾಗಿದೆ.

ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು ಸಂಜೆ 5ರ ವರೆಗೆ ನಡೆಯಲಿದೆ. ಅಕ್ಟೋಬರ್‌ 8ರಂದು ಮತ ಎಣಿಕೆ ನಡೆಯಲಿದೆ.

Haryana Election | ದಾಖಲೆ ಪ್ರಮಾಣದಲ್ಲಿ ಮತ ಹಾಕಿ: ಜನತೆಗೆ ಪ್ರಧಾನಿ ಮೋದಿ ಕರೆ

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗವಹಿಸಿ, ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಿ ಎಂದು ಹರಿಯಾಣದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. 

ಮುಖ್ಯಮಂತ್ರಿ  ಮತದಾನ

ಹರಿಯಾಣ ಮುಖ್ಯಮಂತ್ರಿ ಮತ್ತು ಲಾಡ್ವಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಯಾಬ್ ಸಿಂಗ್ ಸೈನಿ ಅಂಬಾಲಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಬೆಳಿಗ್ಗೆ 9 ಗಂಟೆಯವರೆಗೆ ಶೇ. 9.53% ಮತದಾನ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಶೇ. 9.53% ಮತದಾನ ದಾಖಲಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿ: ಹರಿಯಾಣದ ಮತದಾರರಿಗೆ ಖರ್ಗೆ, ರಾಹುಲ್‌ ಕರೆ

ಹರಿಯಾಣದ ಬದಲಾವಣೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ  ಮತದಾರರಲ್ಲಿ ಮನವಿ ಮಾಡಿದ್ದಾರೆ.

ಬೆಳಗ್ಗೆ 11 ಗಂಟೆ ವೇಳೆಗೆ ಶೇ.22ರಷ್ಟು ಮತದಾನ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬೆಳಿಗ್ಗೆ 11 ಗಂಟೆಯವರೆಗೆ ಶೇ. 22.70ರಷ್ಟು ಮತದಾನ ದಾಖಲಾಗಿದೆ.

ಮಧ್ಯಾಹ್ನ 3 ಗಂಟೆಗೆ ಶೇ 49ರಷ್ಟು ಮತದಾನ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಾಹ್ನ 3 ಗಂಟೆಗೆ ಶೇ 49ರಷ್ಟು ಮತದಾನವಾಗಿದೆ.

ಸಂಜೆ 5 ಗಂಟೆವರೆಗೆ ಶೇ 61ರಷ್ಟು ಮತದಾನ

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸಂಜೆ 5 ಗಂಟೆವರೆಗೆ ಶೇ 61ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮತದಾನ ಮುಕ್ತಾಯ

ಹರಿಯಾಣ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಶೇ 61ರಷ್ಟು ಮತದಾನವಾಗಿದೆ. ಆದರೆ, ಅಂತಿಮ ಮತದಾನದ ಶೇಕಡಾವಾರು ವಿವರವನ್ನು ಚುನಾವಣಾ ಆಯೋಗವು ಇನ್ನಷ್ಟೇ ಪ್ರಕಟಿಸಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.