ADVERTISEMENT

ಹರಿಯಾಣ | ಕಾಂಗ್ರೆಸ್ ಸೇರಿದ BJP ಒಬಿಸಿ, ಕಿಸಾನ್ ಮೋರ್ಚಾ ಅಧ್ಯಕ್ಷರು

ಪಿಟಿಐ
Published 14 ಸೆಪ್ಟೆಂಬರ್ 2024, 12:43 IST
Last Updated 14 ಸೆಪ್ಟೆಂಬರ್ 2024, 12:43 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಚಂಡೀಗಢ: ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲೇ ಹರಿಯಾಣದ ಬಿಜೆಪಿ ಕಿಸಾನ್ ಮೋರ್ಚಾ ಅಧ್ಯಕ್ಷ ಸುಖವೀಂದರ್ ಮಂಡಿ ಹಾಗೂ ಒಬಿಸಿ ಮೋರ್ಚಾದ ಅಧ್ಯಕ್ಷ ಕರಣ್ ದೇವ್ ಕಂಬೋಜ್ ಅವರು ಕಾಂಗ್ರೆಸ್ ಸೇರಿದ್ದಾರೆ. 

ಬಾಧರಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಂಡಿ ಅವರನ್ನು ಕಾಂಗ್ರೆಸ್ ಮುಖಂಡ ಭೂಪಿಂದರ್‌ ಸಿಂಗ್ ಹೂಡಾ ಹಾಗೂ ಹರಿಯಾಣ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನ್ ಅವರು ಪಕ್ಷಕ್ಕೆ ಶನಿವಾರ ಬರಮಾಡಿಕೊಂಡರು.

ADVERTISEMENT

ಮಂಡಿ ಅವರು ಬಾಧರಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಬಿಜೆಪಿ ಇವರಿಗೆ ಟಿಕೆಟ್ ನಿರಾಕರಿಸಿತ್ತು.

ರಾಜ್ಯದ ಬಿಜೆಪಿಯ ಮತ್ತೊಬ್ಬ ಮುಖಂಡ ಕರಣ್ ದೇವ್ ಕಂಬೋಜ್ ಅವರು ಶುಕ್ರವಾರ ಕಾಂಗ್ರೆಸ್ ಸೇರ್ಪಡೆಗೊಂಡರು. ಮಾಜಿ ಸಚಿವರಾಗಿದ್ದ ಇವರಿಗೆ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿತ್ತು. ಹೀಗಾಗಿ ಇವರು ಇತ್ತೀಚೆಗೆ ಹುದ್ದೆಯಿಂದ ಕೆಳಗಿಳಿದಿದ್ದರು. 

‘ಪಕ್ಷಕ್ಕೆ ಹಲವು ವರ್ಷಗಳಿಂದ ದುಡಿದವರನ್ನು ಕಡೆಗಣಿಸಿರುವ ಬಿಜೆಪಿ, ಹಲವು ಹೊಸ ಮುಖಗಳು ಹಾಗೂ ಪಕ್ಷಾಂತರಿಗಳಿಗೆ ಮಣೆ ಹಾಕಿದೆ’ ಎಂದು ಕಂಬೋಜ್ ಆರೋಪಿಸಿದ್ದಾರೆ.

ಹರಿಯಾಣ ವಿಧಾನಸಭೆಯ 90 ಸೀಟುಗಳಿಗೆ ಅ. 5ರಂದು ಮತದಾನ ನಡೆಯಲಿದೆ. ಮತ ಎಣಿಕೆ ಅ. 8ರಂದು ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.