ಫರಿದಾಬಾದ್ (ಹರಿಯಾಣ): ಹರಿಯಾಣದ ಪಲ್ವಾಲ್ ಜಿಲ್ಲೆಯಲ್ಲಿ ಪೈಪ್‌ಲೈನ್‌ನಿಂದ ಅನಿಲ ಸೋರಿಕೆಯಾಗಿ ಸ್ಫೋಟ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕ ಆರೋಗ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಅಮಿತ್ ಮತ್ತು ಅದಾನಿ ಗ್ಯಾಸ್ ಮೇಲ್ವಿಚಾರಕ ವಿಶಾಲ್ ಸೇರಿದಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.
ಮಂಗಳವಾರ ನಗರದ ಹಳೆ ಜಿಟಿ ರಸ್ತೆಯ ಬಳಿ ಘಟನೆ ನಡೆದಿತ್ತು. ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಜೆಸಿಬಿ ಮೂಲಕ ನೀರಿನ ಪೈಪ್‌ಲೈನ್ ದುರಸ್ತಿ ಕಾರ್ಯ ನಡೆಸುವ ವೇಳೆ, ಆಕಸ್ಮಿಕವಾಗಿ ಹತ್ತಿರದ ಪಿಎನ್‌ಜಿ ಗ್ಯಾಸ್ ಪೈಪ್‌ಲೈನ್‌ಗೆ ಹಾನಿಯಾಗಿ ಅನಿಲ ಸೋರಿಕೆ ಉಂಟಾಗಿತ್ತು. ಪರಿಣಾಮ ಪಕ್ಕದಲ್ಲೇ ಇದ್ದ ಟೀ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಂಗಡಿ ಮಾಲೀಕ ಹರಿಚಂದ್ ಸಿಂಗ್ಲಾ ಎಂಬುವವರು ಮೃತಪಟ್ಟಿದ್ದರು. ಮೂವರು ಗಾಯಗೊಂಡಿದ್ದರು.
ಘಟನೆಯಿಂದಾಗಿ ನಗರದ 5,000 ಮನೆಗಳಿಗೆ ಗ್ಯಾಸ್ ಪೂರೈಕೆ ಸ್ಥಗಿತಗೊಂಡಿದ್ದು, ಮೋತಿ ಕಾಲೋನಿಯಲ್ಲಿ ಕುಡಿಯುವ ನೀರು ಸರಬರಾಜು ಮೂರು ದಿನಗಳಿಂದ ಸ್ಥಗಿತಗೊಂಡಿದೆ. ಅಗ್ನಿ ಅವಘಡದಲ್ಲಿ ಎರಡು ಅಂಗಡಿಗಳಲ್ಲಿ ಸಂಗ್ರಹಿಸಲಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.