ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು, ಇದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಪಕ್ಷದ ಅಭ್ಯರ್ಥಿಗಳ ಪರ ಮೊದಲ ಬಾರಿ ರ್‍ಯಾಲಿಯನ್ನು ನಡೆಸಲಿದ್ದಾರೆ.
ಇಂದು ಮಧ್ಯಾಹ್ನ ಪ್ರಧಾನಿ ಮೋದಿ ಅವರು ಕುರುಕ್ಷೇತ್ರದ ಥೀಮ್ ಪಾರ್ಕ್‌ನಲ್ಲಿ ರ್‍ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.
ಬಿಜೆಪಿ ಈ ಬಾರಿಯೂ ಅಧಿಕಾರಕ್ಕೆ ಬರಲಿದ್ದು ಈ ಮೂಲಕ ಮೂರನೇ ಅವಧಿಗೆ ಪಕ್ಷ ಆಡಳಿತದ ಚುಕ್ಕಾಣಿ ಇಡಲಿದೆ. ಪ್ರಧಾನಿ ಮೋದಿ ಅವರು ರ್‍ಯಾಲಿಯಲ್ಲಿ ಭಾಗಿಯಾಗುವುದು ಪಕ್ಷಕ್ಕೆ ಮತ್ತಷ್ಟು ಬಲ ತುಂಬಲಿದೆ ಎಂದು ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಹೇಳಿದ್ದಾರೆ.
ಮೋದಿ ಭೇಟಿ ಹಿನ್ನೆಲೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.
ಹರಿಯಾಣದಲ್ಲಿ ಅಕ್ಟೋಬರ್ 5ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.