ಲಖನೌ: ಹಾಥರಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಥರಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಕ್ರಾಂತ್ ವೀರ್ ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ.
ಘಟನೆಯ ತನಿಖೆ ನಡೆಸುತ್ತಿರುವ ಎಸ್‌ಐಟಿ ಶುಕ್ರವಾರ ಪ್ರಾಥಮಿಕ ವರದಿ ನೀಡಿದ್ದು, ಇದರ ಆಧಾರದ ಮೇಲೆ ಹಾಥರಸ್ ಎಸ್‌ಪಿ ವಿಕ್ರಾಂತ್ ವೀರ್ ಹಾಗೂ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ವಿನೀತ್ ಜೈಸ್ವಾಲ್ ಅವರನ್ನು ಹಾಥರಸ್ ಎಸ್‌ಪಿ ಆಗಿ ನಿಯೋಜಿಸಲಾಗಿದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಅವನೀಶ್ ಅವಸ್ಥಿ ತಿಳಿಸಿದ್ದಾರೆ.
ದೆಹಲಿ ಸೇರಿದಂತೆ ದೇಶದಾದ್ಯಂತ ಸಂತ್ರಸ್ತೆಗೆ ನ್ಯಾಯಕ್ಕಾಗಿ ವಿವಿಧ ಪಕ್ಷಗಳು ಹಾಗೂ ಸಂಘಟನೆಗಳ ಸದಸ್ಯರು ಶುಕ್ರವಾರ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.