ADVERTISEMENT

ಕಾಲ್ತುಳಿತ ಪ್ರಕರಣ: ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಅರ್ಜಿ

ಪಿಟಿಐ
Published 3 ಜುಲೈ 2024, 15:25 IST
Last Updated 3 ಜುಲೈ 2024, 15:25 IST
ಸಪ್ರೀಂ ಕೋರ್ಟ್‌
ಸಪ್ರೀಂ ಕೋರ್ಟ್‌   

ನವದೆಹಲಿ: ಉತ್ತರ ಪ್ರದೇಶದ ಹಾಥರಸ್‌ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮೇಲ್ವಿಚಾರಣೆಯಲ್ಲಿ ಐವರು ತಜ್ಞ ಸದಸ್ಯರ ಸಮಿತಿ ರಚಿಸುವಂತೆ ಕೋರಿ ಬುಧವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಈ ಕುರಿತು ಅರ್ಜಿ ಸಲ್ಲಿಸಿರುವ ವಕೀಲ ವಿಶಾಲ್‌ ತಿವಾರಿ ಅವರು, ಜುಲೈ 2ರ ಘಟನೆಗೆ ಸಂಬಂಧಿಸಿದ ಸ್ಥಿತಿಗತಿ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಹಾಗೂ ನಿರ್ಲಕ್ಷ್ಯವಹಿಸಿದ ಪ್ರಾಧಿಕಾರ, ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಕೋರಿದ್ದಾರೆ. 

ಕಾಲ್ತುಳಿತದಂತಹ ಘಟನೆಗಳನ್ನು ಸಮರ್ಪಕವಾಗಿ ಎದುರಿಸಲು ತಾಲ್ಲೂಕಿನಿಂದ ಜಿಲ್ಲಾ ಮಟ್ಟದವರೆಗೆ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳ ವರದಿಯನ್ನೂ ಸಲ್ಲಿಸಲು ಸರ್ಕಾರಕ್ಕೆ ಸೂಚಿಸುವಂತೆ ಅರ್ಜಿಯಲ್ಲಿ ಕೇಳಲಾಗಿದೆ.

ADVERTISEMENT

ಸಾರ್ವಜನಿಕರು ಹೆಚ್ಚು ಸಂಖ್ಯೆಯಲ್ಲಿ ಸೇರುವ ಯಾವುದೇ ಧಾರ್ಮಿಕ ಅಥವಾ ಇತರ ಕಾರ್ಯಕ್ರಮಗಳನ್ನು ಆಯೋಜಿಸುವಲ್ಲಿ ಜನರ ಸುರಕ್ಷತೆಗೆ ಸಂಬಂಧಿಸಿದಂತೆ ಕಾಲ್ತುಳಿತ ಅಥವಾ ಇತರ ಘಟನೆಗಳನ್ನು ತಡೆಗಟ್ಟಲು ಮಾರ್ಗಸೂಚಿಗಳನ್ನು ಪ್ರಕಟಿಸಲು ರಾಜ್ಯಗಳಿಗೆ ನಿರ್ದೇಶನ ನೀಡುವಂತೆಯೂ ಮನವಿಯಲ್ಲಿ ಕೋರಲಾಗಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.