ADVERTISEMENT

ಹಾಥರಸ್‌ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸಿಎಂ ಯೋಗಿಗೆ ರಾಹುಲ್‌ ಪತ್ರ

ಪಿಟಿಐ
Published 7 ಜುಲೈ 2024, 7:54 IST
Last Updated 7 ಜುಲೈ 2024, 7:54 IST
<div class="paragraphs"><p>ರಾಹುಲ್‌</p></div>

ರಾಹುಲ್‌

   

ಹಾಥರಸ್‌: ‘ಹಾಥರಸ್‌ ಜಿಲ್ಲೆಯಲ್ಲಿ ಸಂಭವಿಸಿದ ಕಾಲ್ತುಳಿತ ದುರ್ಘಟನೆಯಲ್ಲಿ ಸಂತ್ರಸ್ತರಾದವರಿಗೆ ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪತ್ರ ಬರೆದಿದ್ದಾರೆ. 

ಹಾಗೇ ಈ ದುರ್ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ಈಗಾಗಲೇ ಉತ್ತರ ಪ್ರದೇಶ ಸರ್ಕಾರ ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ತಲಾ ₹ 2ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹ 50 ಸಾವಿರ ನೀಡುವುದಾಗಿ ಘೋಷಣೆ ಮಾಡಿದೆ. ಈ ಪರಿಹಾರವು ತುಂಬಾ ಕಡಿಮೆಯಾಗಿದೆ, ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಮತ್ತು ಅದನ್ನು ಆದಷ್ಟು ಬೇಗ ನೀಡಬೇಕು ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ. 

ಕಳೆದ ಶುಕ್ರವಾರ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಿ ರಾಹುಲ್‌ ಗಾಂಧಿ ಅವರಿಗೆ ಸಾಂತ್ವಾನ ಹೇಳಿದ್ದರು. 

ಈ ಘಟನೆ ಕುರಿತಂತೆ ನಾನು ರಾಜಕೀಯ ದೃಷ್ಟಿಕೋನದಿಂದ ಮಾತನಾಡಲು ಬಯಸುವುದಿಲ್ಲ. ಈ ವಿಷಯದಲ್ಲಿ ಆಡಳಿತಾತ್ಮಕ ಲೋಪಗಳು ಇವೆ. ಹಲವು ಪ್ರಮಾದಗಳೂ ಇದ್ದು, ಅವುಗಳನ್ನು ಗುರುತಿಸಬೇಕಿದೆ’ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕರು ಆಗಿರುವ ರಾಹುಲ್‌ ಗಾಂಧಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.