ಚಂಡೀಗಢ: ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌಧಾದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ.
‘ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್ ಅವರನ್ನು ಖುಲಾಸೆಗೊಳಿಸಿದೆ’ ಎಂದು ಗುರ್ಮೀತ್ ರಾಮ್ ರಹೀಮ್ ಸಿಂಗ್ ಪರ ವಕೀಲ ಜಿತೇಂದರ್ ಖುರಾನಾ ಹೇಳಿದ್ದಾರೆ.
ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಪ್ರಸ್ತುತ ಹರಿಯಾಣದ ರೋಹ್ಟಕ್‌ನಲ್ಲಿರುವ ಸುನಾರಿಯಾ ಜೈಲಿನಲ್ಲಿದ್ದಾರೆ.
ರಂಜಿತ್ ಸಿಂಗ್ ಅವರನ್ನು 2002 ಜುಲೈ 10 ರಂದು ಹರಿಯಾಣದ ಕುರುಕ್ಷೇತ್ರದ ಖಾನ್‌ಪುರ್ ಕೊಲಿಯನ್ ಗ್ರಾಮದಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು. ಘಟನೆ ನಡೆದ 19 ವರ್ಷಗಳ ಬಳಿಕ ವಿಶೇಷ ಸಿಬಿಐ ನ್ಯಾಯಾಲಯವು 2021 ರಲ್ಲಿ ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಗುರ್ಮೀತ್ ರಾಮ್ ರಹೀಮ್ ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.