ಇಂದೋರ್: ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿರುವ ಮಧ್ಯಕಾಲೀನ ಯುಗದ ಭೋಜಶಾಲಾ ಕಟ್ಟಡದ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಮಧ್ಯಪ್ರದೇಶ ಹೈಕೋರ್ಟ್ ಸೋಮವಾರ ಆದೇಶಿಸಿದೆ.
‘ಹಿಂದಿ ಫ್ರಂಟ್ ಫಾರ್ ಜಸ್ಟಿಸ್’ ಎಂಬ ಸಂಘಟನೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ಎಸ್. ಎ ಧರ್ಮಾಧಿಕಾರಿ ಮತ್ತು ದೇವನಾರಾಯಣ ಮಿಶ್ರಾ ಅವರಿದ್ದ ವಿಭಾಗಿಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ. ಜತೆಗೆ ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.
11 ನೇ ಶತಮಾನದ ಸ್ಮಾರಕ ಎಂದು ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಂರಕ್ಷಿಸಿರುವ ಈ ಕಟ್ಟಡವನ್ನು ಹಿಂದೂಗಳು ವಾಗ್ದೇವಿ (ಸರಸ್ವತಿ) ದೇವಾಲಯವೆಂದು ಪೂಜಿಸಿದರೆ, ಮುಸ್ಲಿಮರು ಕಮಲ್ ಮೌಲಾ ಮಸೀದಿ ಎನ್ನುತ್ತಾರೆ.
2003ರಲ್ಲಿ ಪುರಾತತ್ವ ಸರ್ವೇಕ್ಷಣಾ ಇಲಾಖೆ ರೂಪಿಸಿದ್ದ ವ್ಯವಸ್ಥೆಯ ಪ್ರಕಾರ, ಈ ಭೋಜಶಾಲಾ ಕಟ್ಟಡದಲ್ಲಿ ಪ್ರತಿ ಮಂಗಳವಾರ ಹಿಂದೂಗಳು ವಾಗ್ದೇವಿ ಪೂಜೆ ಮಾಡುತ್ತಾರೆ ಹಾಗೂ ಮುಸ್ಲಿಮರು ಪ್ರತಿ ಶುಕ್ರವಾರ ನಮಾಜ್ ಮಾಡುತ್ತಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.