ADVERTISEMENT

ಕೇಜ್ರಿವಾಲ್ ಭೇಟಿಗೆ ಅವಕಾಶ: ಜೈಲಿನ ಅಧಿಕಾರಿಗಳ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್‌

ಪಿಟಿಐ
Published 4 ಸೆಪ್ಟೆಂಬರ್ 2024, 13:31 IST
Last Updated 4 ಸೆಪ್ಟೆಂಬರ್ 2024, 13:31 IST
<div class="paragraphs"><p>ಅರವಿಂದ ಕೇಜ್ರಿವಾಲ್</p></div>

ಅರವಿಂದ ಕೇಜ್ರಿವಾಲ್

   

ನವದೆಹಲಿ: ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಅವಕಾಶ ನೀಡುವಂತೆ ಕೋರಿ ಎಎಪಿ ಸಂಸದ ಸಂಜಯ್‌ ಸಿಂಗ್‌ ಅವರು ಸಲ್ಲಿಸಿರುವ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ದೆಹಲಿ ಹೈಕೋರ್ಟ್‌ ತಿಹಾರ್ ಜೈಲಿನ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.  

ಸಂಜಯ್‌ ಅರ್ಜಿಯ ಬಗ್ಗೆ 3 ದಿನಗಳೊಳಗಾಗಿ ಪ್ರತಿಕ್ರಿಯೆ ನೀಡುವಂತೆ ಆದೇಶಿಸಿರುವ ನ್ಯಾಯಮೂರ್ತಿ ನೀನಾ ಬನ್ಸಲ್‌ ಕೃಷ್ಣ ಅವರು ಅರ್ಜಿಯ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿದ್ದಾರೆ.

ADVERTISEMENT

‘ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ಭೇಟಿಯಾಗಲು ಜೈಲಿನ ಅಧಿಕಾರಿಗಳು ಅನುಮತಿ ನೀಡುತ್ತಿಲ್ಲ’ ಎಂದು ಸಂಜಯ್‌ ಆರೋಪಿಸಿದ್ದಾರೆ. 

‘ಕೇಜ್ರಿವಾಲ್ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿದೆ. ಅವರ ಕುಟುಂಬದವರು ಅವರನ್ನು ಭೇಟಿ ಮಾಡಲು ಬಯಸುತ್ತಿದ್ದಾರೆ. ಈ ವಿಚಾರದಲ್ಲಿ ಜೈಲಿನ ಅಧಿಕಾರಿಯ ವರ್ತನೆಯು ಆಶ್ಚರ್ಯಕರವಾಗಿದೆ. ನಾನು ರಾಜ್ಯಸಭೆಯ ಸದಸ್ಯ ಮತ್ತು ವಿಚಾರಣಾಧೀನ ಕೈದಿಯಾಗಿದ್ದು ನಿಯಮಗಳನ್ನು ಉಲ್ಲಂಘಿಸುವುದಿಲ್ಲ’ ಎಂದು ಸಂಜಯ್‌ ತಿಳಿಸಿದ್ದಾರೆ.

ಸಂಜಯ್ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡಲು 1 ವಾರ ಕಾಲಾವಕಾಶ ನೀಡುವಂತೆ ಜೈಲಿನ ಅಧಿಕಾರಿಗಳ ಪರ ವಕೀಲರು ಮನವಿ ಮಾಡಿದ್ದರು. ಆದರೆ, ನ್ಯಾಯಾಲಯ ಮೂರು ದಿನಗಳ ಕಾಲಾವಕಾಶ ನೀಡಿದೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಕೇಜ್ರಿವಾಲ್ ಅವರು ತಿಹಾರ್‌ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದೇ ಪ್ರಕರಣದಲ್ಲಿ ಸಂಜಯ್‌ ಅವರಿಗೆ ಏ.2ರಂದು ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.