ಮುಂಬೈ: ತಮ್ಮ ವಿರುದ್ಧ ಕೇಂದ್ರ ಸರ್ಕಾರದ ಗಂಭೀರ ವಂಚನೆ ಪ್ರಕರಣಗಳ ತನಿಖಾ ಕಚೇರಿ (ಎಸ್‌ಎಫ್‌ಐಒ)ಲುಕ್‌ಔಟ್ ನೋಟಿಸ್ (ಎಲ್‌ಒಸಿ) ಹೊರಡಿಸಿರುವುದನ್ನು ಪ್ರಶ್ನಿಸಿ ವಜ್ರ ವ್ಯಾಪಾರಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ.
ವಜ್ರ ವ್ಯಾಪಾರಿ ರಮೇಶ್ ಶಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಪಿ.ಬಿ.ವರಾಲೆ ಹಾಗೂ ಎಸ್.ಎಂ.ಮೋದಕ್ ಅವರಿದ್ದ ನ್ಯಾಯಪೀಠ ನಡೆಸಿತು.
ತನ್ನ ಪ್ರಯಾಣದ ಮೇಲೆ ಹೇರಿರುವ ನಿರ್ಬಂಧಗಳನ್ನು ಹಿಂಪಡೆಯುವಂತೆ ಎಸ್‌ಎಫ್‌ಐಒಗೆ ನಿರ್ದೇಶನ ನೀಡಬೇಕು ಎಂಬ ರಮೇಶ್ ಶಾ ಅವರ ಮನವಿಯನ್ನು ಸಹ ನ್ಯಾಯಪೀಠ ತಿರಸ್ಕರಿಸಿದೆ.
ವಂಚನೆ ಪ್ರಕರಣದ ಆರೋಪಿಯಾಗಿರುವ ದೇಶ ತೊರೆದಿರುವ ವಜ್ರವ್ಯಾಪಾರಿ ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ ವಿರುದ್ಧ ತನಿಖೆ ನಡೆಯುತ್ತಿದೆ. ಈ ತನಿಖೆಯ ಭಾಗವಾಗಿಶಾವಿರುದ್ಧಎಸ್‌ಎಫ್‌ಐಒ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.