ADVERTISEMENT

ಎಲ್ಗಾರ್ ಪರಿಷತ್ –ಮಾವೋವಾದಿ ನಂಟು: ಮಹೇಶ್‌ ರಾವುತ್‌ಗೆ ಜಾಮೀನು

ಪಿಟಿಐ
Published 21 ಸೆಪ್ಟೆಂಬರ್ 2023, 14:24 IST
Last Updated 21 ಸೆಪ್ಟೆಂಬರ್ 2023, 14:24 IST
   

ಮುಂಬೈ: ಎಲ್ಗಾರ್ ಪರಿಷತ್–ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ, ಹೋರಾಟಗಾರ ಮಹೇಶ್ ರಾವುತ್‌ಗೆ (33) ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಎ.ಎಸ್‌. ಗಡ್ಕರಿ ಮತ್ತು ಶರ್ಮಿಳಾ ದೇಶ್‌ಮುಖ್‌ ಅವರಿದ್ದ ವಿಭಾಗೀಯ ಪೀಠವು, ಜಾಮೀನು ಕೋರಿ ರಾವುತ್ ಸಲ್ಲಿಸಿದ್ದ ಮನವಿಯನ್ನು ಅಂಗೀಕರಿಸಿತು.

ಪೀಠವು ತನ್ನ ಆದೇಶ ಪ್ರಕಟಿಸಿದಾಗ, ಎನ್‌ಐಎ ಪರ ಹಾಜರಿದ್ದ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಸಂದೇಶ್‌ ಪಾಟೀಲ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು, ಎರಡು ವಾರಗಳ ಕಾಲ ಆದೇಶಕ್ಕೆ ತಡೆ ನೀಡುವಂತೆ ಪೀಠವನ್ನು ಕೋರಿದರು. ನಂತರ ಪೀಠವು, ಆದೇಶಕ್ಕೆ ಒಂದು ವಾರ ತಡೆ ನೀಡಿತು.

ADVERTISEMENT

ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ತನ್ನ ವಿರುದ್ಧ ಮಾಡಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ತನ್ನ ಕಸ್ಟಡಿಯು ಅನಗತ್ಯ ಮತ್ತು ಇದು ಸಂವಿಧಾನದ 14 ಮತ್ತು 21ನೇ ವಿಧಿಗೆ ವಿರುದ್ಧವಾಗಿದೆ ಎಂದು ಮಹೇಶ್‌ ತಮ್ಮ ಮನವಿಯಲ್ಲಿ ವಾದಿಸಿದ್ದರು. 

ರಾವುತ್ ಅವರನ್ನು 2018ರ ಜೂನ್‌ನಲ್ಲಿ ಬಂಧಿಸಿದ್ದು, ಸದ್ಯ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ವಿಶೇಷ ಎನ್‌ಐಎ ನ್ಯಾಯಾಲಯವು ಜಾಮೀನು ನಿರಾಕರಿಸಿದ ಆದೇಶವನ್ನು ಪ್ರಶ್ನಿಸಿ ಮಹೇಶ್‌ ರಾವುತ್‌, 2022ರಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.