ನವದೆಹಲಿ: ಕೋವಿಡ್-19 ಸಾಂಕ್ರಾಮಿಕದ ವೇಳೆ ಅಲೋಪತಿ ವಿರುದ್ಧ ತಪ್ಪು ಮಾಹಿತಿ ಹರಡಿದ ಆರೋಪದ ಮೇಲೆ ಹಲವು ವೈದ್ಯರ ಸಂಘಗಳು ದಾಖಲಿಸಿದ್ದ ಮೊಕದ್ದಮೆಯ ಮೇರೆಗೆ ದೆಹಲಿ ಹೈಕೋರ್ಟ್ ಬುಧವಾರ ರಾಮದೇವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಗೂಗಲ್, ಫೇಸ್‌ಬುಕ್ ಮತ್ತು ಟ್ವಿಟರ್‌ಗಳಿಗೂ ನ್ಯಾಯಾಲಯ ನೋಟಿಸ್ ನೀಡಿದೆ.
ನ್ಯಾಯಮೂರ್ತಿ ಸಿ. ಹರಿಶಂಕರ್ ಅವರು, ಪ್ರತಿಕ್ರಿಯೆ ಸಲ್ಲಿಸಲು ರಾಮ್‌ದೇವ್ ಅವರಿಗೆ ನಾಲ್ಕು ವಾರಗಳ ಕಾಲಾವಕಾಶ ನೀಡಿದರು. ವಿಚಾರಣೆಯನ್ನು ಜನವರಿಗೆ ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.