ನವದೆಹಲಿ: ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ (ಎಬಿಡಿಎಂ) ಅಡಿಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗೆ 10 ಕೋಟಿಗೂ ಅಧಿಕ ಆರೋಗ್ಯ ದಾಖಲೆಗಳನ್ನು ಜೋಡಣೆ ಮಾಡಲಾಗಿದೆ.
‘ಎಬಿಡಿಎಂ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. 10 ಕೋಟಿಗೂ ಅಧಿಕ ಆರೋಗ್ಯ ದಾಖಲೆಗಳನ್ನು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಯೊಂದಿಗೆ ಜೋಡಿಸಲಾಗಿದೆ. ನಮ್ಮ ಕಾರ್ಯಕ್ಕೆ ಕೈಜೋಡಿಸಿದ ದೇಶದ ಎಲ್ಲಾ ನಾಗರಿಕರಿಗೂ ನಾವು ಆಭಾರಿಯಾಗಿದ್ದೇವೆ. ದೇಶದಲ್ಲಿನ ಆರೋಗ್ಯ ಸೇವಾ ಸಂಸ್ಥೆಗಳಿಗೆ ಸಮಗ್ರ ವೈದ್ಯಕೀಯ ಮಾಹಿತಿ ಒದಗಿಸಲು ಇದರಿಂದ ಸಹಕಾರಿಯಾಗಲಿದೆ’ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ (ಎನ್‌ಎಚ್‌ಎ) ಸಿಇಒ ಡಾ.ಆರ್.ಎಸ್.ಶರ್ಮಾ ಸೋಮವಾರ ಟ್ವೀಟ್ ಮಾಡಿದ್ದಾರೆ.
ಈವರೆಗೂ 30 ಕೋಟಿಗೂ ಅಧಿಕ ಮಂದಿ ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗಳನ್ನು (ಎಬಿಎಚ್‌ಎ) ಸೃಷ್ಟಿಸಿದ್ದಾರೆ ಎಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.