ADVERTISEMENT

ಮಸೀದಿಗಳಲ್ಲಿ ಮಹಿಳೆಯರ ಪ್ರಾರ್ಥನೆಗೆ ಅರ್ಜಿ: ಕೇಂದ್ರಕ್ಕೆ ಸುಪ್ರೀಂ ನೋಟಿಸ್‌ 

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 10:54 IST
Last Updated 16 ಏಪ್ರಿಲ್ 2019, 10:54 IST
   

ನವದೆಹಲಿ: ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಮಹಿಳೆಯರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಕೋರಿ ಪುಣೆ ಮೂಲದ ದಂಪತಿಗಳು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು ಕೇಂದ್ರ ಸರ್ಕಾರ ಮತ್ತು ಮಹಿಳಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ಮಹಿಳೆಯರಿಗೆಮಸೀದಿ ಪ್ರವೇಶಕ್ಕಿರುವ ನಿಷೇಧವನ್ನು ತೆರವುಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು. ಈ ಸಂಬಂಧ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರ, ರಾಷ್ಟ್ರೀಯ ಮಹಿಳಾ ಆಯೋಗ, ಅಖಿಲ ಭಾರತಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗಳು ಸೇರಿದಂತೆಕೇಂದ್ರೀಯ ವಕ್ಫ್ ಮಂಡಳಿಗೆ ನೋಟಿಸ್‌ ಜಾರಿ ಮಾಡಿದೆ.

ಮಹಿಳೆಯರಿಗೆಮಸೀದಿ ಪ್ರವೇಶ ನಿಷೇಧ ಎನ್ನುವುದು ಸಮಾನ ಮತ್ತು ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ. ಪುರುಷರಂತೆ ಮಹಿಳೆಯರಿಗೆ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಬೇಕು. ಕಳೆದ ಸೆಪ್ಟೆಂಬರ್ ತಿಂಗಳು ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ ಪ್ರವೇಶಕ್ಕೆ ಮಹಿಳೆಯರಿಗೆ ಸುಪ್ರೀಂಕೋರ್ಟ್‌ ಅವಕಾಶ ಕಲ್ಪಿಸಿದೆ ಅದರಂತೆ ಮುಸ್ಲಿಂ ಮಹಿಳೆಯರಿಗೆ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಅರ್ಜಿದಾರರು ವಾದಿಸಿದ್ದಾರೆ.

ADVERTISEMENT

ಪುಣೆ ಮೂಲದ ಯಾಸ್ಮಿನ್‌ ಜುಬೇರ್ ಮತ್ತು ಜುಬೇರ್ ನಾಜೀರ್ ಎಂಬುವರು ಅರ್ಜಿ ಸಲ್ಲಿಸಿದ್ದಾರೆ. ಸಂವಿಧಾನದ 32ನೇ ವಿಧಿಯು ಧಾರ್ಮಿಕ ಆಚರಣೆಗಳಲ್ಲಿ ಪುರುಷರ ಮತ್ತು ಮಹಿಳೆಯರಿಗೆ ಸಮಾನ ಅವಕಾಶ ಇರಬೇಕು ಎಂದು ಸ್ಪಷ್ಟವಾಗಿ ಹೇಳುತ್ತದೆ ಎಂದು ಅರ್ಜಿದಾರರು ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.