ನವದೆಹಲಿ: ಇಲ್ಲಿನ ವಿವೇಕ್ ವಿಹಾರ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟ ನವಜಾತ ಶಿಶುಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ. ಇದೊಂದು ಹೃದಯ ವಿದ್ರಾವಕ ಘಟನೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.
‘ದೆಹಲಿಯ ವಿವೇಕ್ ವಿಹಾರ್‌ನಲ್ಲಿರುವ ಆಸ್ಪತ್ರೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಹಲವಾರು ಮಕ್ಕಳು ಸಾವನ್ನಪ್ಪಿದ ಸುದ್ದಿ ಹೃದಯ ವಿದ್ರಾವಕವಾಗಿದೆ. ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ತಂದೆ-ತಾಯಿ ಮತ್ತು ಕುಟುಂಬಕ್ಕೆ ನೀಡಲಿ. ಈ ಘಟನೆಯಲ್ಲಿ ಗಾಯಗೊಂಡಿರುವ ಇತರ ಮಕ್ಕಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ’ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಘಟನೆಯಲ್ಲಿ 7 ನವಜಾತ ಶಿಶುಗಳು ಸಾವನ್ನಪ್ಪಿವೆ. 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ.
ರಾತ್ರಿ 11.30 ಸುಮಾರಿಗೆ ಆಸ್ಪತ್ರೆ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಕಟ್ಟಡದಿಂದ 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.