ADVERTISEMENT

ಬಾರಾಮುಲ್ಲಾ: ಶಸ್ತ್ರಸಜ್ಜಿತ ಉಗ್ರನ ಹತ್ಯೆ; ಭಾರಿ ಪ್ರಮಾಣದ ಮದ್ದು, ಗುಂಡು ವಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಅಕ್ಟೋಬರ್ 2024, 4:02 IST
Last Updated 21 ಅಕ್ಟೋಬರ್ 2024, 4:02 IST
<div class="paragraphs"><p>ಕಾಶ್ಮೀರ: ಎನ್‌ಕೌಂಟರ್‌ನಲ್ಲಿಉಗ್ರನ ಹತ್ಯೆ</p></div>

ಕಾಶ್ಮೀರ: ಎನ್‌ಕೌಂಟರ್‌ನಲ್ಲಿಉಗ್ರನ ಹತ್ಯೆ

   

ಬಾರಾಮುಲ್ಲಾ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕನನ್ನು ಹೊಡೆದುರುಳಿಸಲಾಗಿದ್ದು, ಮದ್ದು–ಗುಂಡು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ.

‘ಭಾರಿ ಶಸ್ತ್ರಾಸ್ತ್ರ ಹೊಂದಿದ್ದ ಒಬ್ಬ ಉಗ್ರನನ್ನು ಜಂಟಿ ಕಾರ್ಯಾಚರಣೆಯಲ್ಲಿ ಹತ್ಯೆ ಮಾಡಲಾಗಿದೆ. ಒಂದು ಎಕೆ ಸರಣಿಯ ರೈಫಲ್, ಎರಡು ಎಕೆ ಸರಣಿಯ ಮ್ಯಾಗಜಿನ್, 57 ಸುತ್ತು ಎಕೆ ಸರಣಿಯ ಗುಂಡು, 2 ಪಿಸ್ತೂಲ್‌ಗಳು, ಮೂರು ಪಿಸ್ತೂಲ್ ಮ್ಯಾಗಜಿನ್ ಸೇರಿದಂತೆ ಯುದ್ಧೋಪಾದಿಯಲ್ಲಿ ಸಂಗ್ರಹಿಸಿಟ್ಟಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆಯ ಚಿನಾರ್ ಕೋರ್‌ ಪ್ರಕಟಣೆ ತಿಳಿಸಿದೆ.

ADVERTISEMENT

ಈ ಪ್ರದೇಶದಲ್ಲಿ ಒಳನುಸುಳುವಿಕೆ ತಡೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಭಾರತೀಯ ಸೇನೆಯ ಚಿನಾರ್ ಕೋರ್‌ ತಿಳಿಸಿದೆ.

‘ಉಗ್ರರ ಸಂಭಾವ್ಯ ಒಳನುಸುಳುವಿಕೆ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಒಳನುಸುಳುವಿಕೆ ತಡೆಗೆ ಜಂಟಿ ಕಾರ್ಯಾಚರಣೆಯನ್ನು ಉರಿ, ಬಾರಾಮುಲ್ಲಾ ಗಡಿಗಳಲ್ಲಿ ಆರಂಭಿಸಿದ್ದರು. ಕಣ್ಗಾವಲು ಪಡೆಗಳು ಅನುಮಾನಾಸ್ಪದ ಚಟುವಟಿಕೆಯನ್ನು ಗುರುತಿಸಿದವು, ಕಾರ್ಯಾಚರಣೆಗೆ ಮುಂದಾದ ಸೇನೆ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಸೇನೆಯು ಪ್ರತಿದಾಳಿ ನಡೆಸಿದ್ದು, ಕಾರ್ಯಾಚರಣೆ ಮುಂದುವರಿದಿದೆ’ಎಂದು ಚಿನಾರ್ ಕೋರ್ ತಿಳಿಸಿದೆ.

ಈ ಮಧ್ಯೆ, ಭಾನುವಾರ ಸಂಜೆ ಜಮ್ಮು ಮತ್ತು ಕಾಶ್ಮೀರದ ಗಾಂದರಬಲ್ ಜಿಲ್ಲೆಯ ಗಗಂಗೀರ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಐವರು ಕಾರ್ಮಿಕರು, ಒಬ್ಬ ವೈದ್ಯ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ದಾಳಿಯನ್ನು ಖಂಡಿಸಿದ್ದು, ಇದು ಕಾರ್ಮಿಕರ ಮೇಲೆ ನಡೆದ‘ಭೀಕರ ಮತ್ತು ಹೇಡಿತನದ’ಕೃತ್ಯ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.