ADVERTISEMENT

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ

ಪಿಟಿಐ
Published 6 ಜುಲೈ 2024, 2:23 IST
Last Updated 6 ಜುಲೈ 2024, 2:23 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಉತ್ತರಾಖಂಡ, ಹಿಮಾಚಲ ಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಪ್ರಮುಖ ನದಿಗಳು ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ. ಇದರಿಂದಾಗಿ ಸುಮಾರು 24 ಲಕ್ಷ ಜನರು ಸಂಕಷ್ಟ ಎದುರಿಸುತ್ತಿದ್ದಾರೆ.

ADVERTISEMENT

ಉತ್ತರಾಖಂಡನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮಳೆ ನೀರು ತುಂಬಿದ ಹೊಂಡದಲ್ಲಿ ಮುಳುಗಿ ಐದು ವರ್ಷದ ಮಗು ಮೃತಪಟ್ಟಿದೆ. ಹರಿದ್ವಾರದ ನದಿಯಲ್ಲಿ ಯುವಕನೊಬ್ಬ ಮುಳುಗಿ ಸಾವಿಗೀಡಾಗಿದ್ದಾನೆ.

ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವು ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿದೆ. ಇದರಿಂದಾಗಿ ಬದ್ರಿನಾಥಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ಪ್ರಮುಖ ರಸ್ತೆಗಳ ಸಂಚಾರ ಸ್ಥಗಿತಗೊಂಡಿದೆ.

ಹಿಮಾಚಲ ಪ್ರದೇಶದ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ರಾಜ್ಯದ 64 ರಸ್ತೆಗಳ ಸಂಚಾರ ಸ್ಥಗಿತಗೊಂಡಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕಾಂಗ್ರಾ, ಕುಲ್ಲು, ಕಿನೌರ್‌, ಮಂಡಿ, ಸಿರಮೌರ್ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಬಹುದು ಎಂದು ಪ್ರಾದೇಶಿಕ ಹವಾಮಾನ ಕಚೇರಿ ಎಚ್ಚರಿಕೆ ನೀಡಿದೆ.

ರಾಜಸ್ಥಾನದಲ್ಲಿ ಭಾರಿ ಮಳೆ ಮುಂದುವರಿದಿದೆ. ಟೋಂಕ್‌ ಜಿಲ್ಲೆಯ ಮಾಲ್ಪುರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 176 ಮಿ.ಮೀ ದಾಖಲೆ ಮಳೆಯಾಗಿದೆ.

ಮಳೆಯಿಂದಾಗಿ ಅಸ್ಸಾಂನ 30 ಜಿಲ್ಲೆಗಳಲ್ಲಿ ಸುಮಾರು 24 ಲಕ್ಷ ಜನರು ತೊಂದರೆಗೀಡಾಗಿದ್ದಾರೆ. ರಾಜ್ಯದ ಎಲ್ಲ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ತೀವ್ರಗೊಂಡಿದೆ.

ಅಸ್ಸಾಂನಲ್ಲಿ ಮಳೆಯಿಂದಾಗಿ 77 ಪ್ರಾಣಿಗಳು ಸತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.