ADVERTISEMENT

ಪುಣೆಯಲ್ಲಿ ಭಾರಿ ಮಳೆ, ನಾಲ್ವರು ಸಾವು: ರೆಡ್‌ ಅಲರ್ಟ್‌ ಘೋಷಣೆ

ಪಿಟಿಐ
Published 25 ಜುಲೈ 2024, 6:42 IST
Last Updated 25 ಜುಲೈ 2024, 6:42 IST
<div class="paragraphs"><p>ಪುಣೆಯ ಮುತಾ ನದಿಯಲ್ಲಿ ನೀರಿನ ಮಟ್ಟ ಹಚ್ಚಳವಾಗಿರುವುದು</p></div>

ಪುಣೆಯ ಮುತಾ ನದಿಯಲ್ಲಿ ನೀರಿನ ಮಟ್ಟ ಹಚ್ಚಳವಾಗಿರುವುದು

   

ಪಿಟಿಐ ಚಿತ್ರ

ಪುಣೆ: ಮಹಾರಾಷ್ಟ್ರದ ಪುಣೆ ನಗರದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ತಗ್ಗು ಪ್ರದೇಶದ ನೂರಾರು ಮನೆಗಳು ಜಲಾವೃತವಾಗಿವೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದ್ದು, ಮಳೆ ಸಂಬಂಧಿತ ಅವಘಡಗಳಿಂದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ADVERTISEMENT

ಹವಾಮಾನ ಇಲಾಖೆ ಪುಣೆಯಾದ್ಯಂತ ಮುಂದಿನ 24 ಗಂಟೆಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದು, ಮುನ್ನೆಚ್ಚರಿಕೆಯಿಂದ ಇರುವಂತೆ ನಾಗರಿಕರಿಗೆ ಸೂಚನೆ ನೀಡಿದೆ. ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪುಣೆ ಸುತ್ತಮುತ್ತಲಿನ ತಾಲ್ಲೂಕುಗಳಲ್ಲಿರುವ ಅನೇಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತದೆ. ಖಡಕ್‌ವಾಸ್ಲಾ ಜಲಾಶಯದಲ್ಲಿಯೂ ನೀರಿನ ಮಟ್ಟ ಏರಿಕೆಯಾಗಿದ್ದು ಈಗಾಗಲೇ 35,000 ಕ್ಯುಸೆಕ್‌ಗಿಂತ ಹೆಚ್ಚು ನೀರು ಬಿಡಲಾಗುತ್ತಿದೆ. ಮಳೆಯಿಂದಾಗಿ ನೀರಿನ ಮಟ್ಟ ಇನ್ನಷ್ಟು ಹೆಚ್ಚಳವಾಗುತ್ತಿರುವ ಕಾರಣ ನದಿಗೆ ಬಿಡುವ ನೀರಿನ ಪ್ರಮಾಣ 45,000 ಕ್ಯೂಸೆಕ್‌ಗೆ ಹೆಚ್ಚಲಿದೆ. ಇದರಿಂದಾಗಿ ಇನ್ನಷ್ಟು ತಗ್ಗು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಇದ್ದು, ಜನರನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪುಣೆ ಮಹಾನಗರ ಪಾಲಿಕೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.