ಚೆನ್ನೈ: ತಮಿಳುನಾಡಿನ ಹಲವಾರು ಭಾಗಗಳು ಮತ್ತು ಪುದುಚೇರಿಯ ಕಾರೈಕಲ್‌ನಲ್ಲಿ ಇದೇ 14 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರವು ಗುರುವಾರ ತಿಳಿಸಿದೆ.
ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲುಪುರಂ, ಕಡಲೂರು, ಕಲ್ಲಕುರಿಚಿ, ತಿರುಚಿರಾಪಳ್ಳಿ, ಪುದುಕೊಟ್ಟೈ, ಶಿವಗಂಗಾ, ರಾಮನಾಥಪುರಂ, ನೀಲಗಿರಿ, ಕೊಯಮತ್ತೂರು ಮತ್ತು ತಿರುಪ್ಪೂರ್ ಘಟ್ಟ ಪ್ರದೇಶಗಳು, ಥೇಣಿ ಮತ್ತು ದಿಂಡಿಗಲ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.
ಅಕ್ಟೋಬರ್ 12 ರಂದು ದಕ್ಷಿಣ ಬಂಗಾಳ ಕೊಲ್ಲಿಯ ಮಧ್ಯ ಭಾಗಗಳಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಯಿದೆ. ಇದು ವ್ಯಾಪಕ ಮಳೆಯನ್ನು ತರುವ ಸಾಧ್ಯತೆಯಿದೆ ಎಂದು ಅದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.