ADVERTISEMENT

ಕೇರಳ | ಭಾರಿ ಮಳೆ: ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ

ಪಿಟಿಐ
Published 3 ಅಕ್ಟೋಬರ್ 2023, 10:26 IST
Last Updated 3 ಅಕ್ಟೋಬರ್ 2023, 10:26 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ತಿರುವನಂತಪುರ: ಕಳೆದ ಕೆಲವು ದಿನಗಳಿಂದ ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ವಿವಿಧ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಇಂದು (ಮಂಗಳವಾರ) ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ತೀವ್ರ ಮಳೆ ಹಿನ್ನೆಲೆಯಲ್ಲಿ ಕೊಟ್ಟಾಯಂ, ವೈಕಂ ಮತ್ತು ಚಂಗನಾಶ್ಶೇರಿ ತಾಲ್ಲೂಕುಗಳಲ್ಲಿ ಜಿಲ್ಲಾಡಳಿತವು ರಜೆ ಘೋಷಿಸಿದೆ. ಅಲ್ಲಿ 17 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 246 ಮಂದಿ ಆಶ್ರಯ ಪಡೆದಿದ್ದಾರೆ.

ADVERTISEMENT

ಇಂದು ಕೇರಳದ ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಿದೆ.

ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಹಲವೆಡೆ ಮರಗಳು ಧರೆಗುರುಳಿದ್ದು, ವಿವಿಧ ಪ್ರದೇಶಗಳು ಜಲಾವೃತಗೊಂಡು, ಮನೆಗಳ ಕಾಂಪೌಂಡ್‌ ಗೋಡೆಗಳು ಕುಸಿದು ಬಿದ್ದ ಘಟನೆಗಳು ವರದಿಯಾಗಿವೆ. ಆದರೆ, ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಭಾರಿ ಮಳೆಯಿಂದಾಗಿ ಆಲಪ್ಪುಳ ಜಿಲ್ಲೆಯ ಕುಟ್ಟನಾಡ್‌ ಪ್ರದೇಶದ ಎಡತುವಾ ಎಂಬ ಗ್ರಾಮದಲ್ಲಿ ನೂರಾರು ಎಕರೆ ಭತ್ತದ ಗದ್ದೆಗಳು ಜಲಾವೃತಗೊಂಡಿವೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜನರಿಗೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.