ADVERTISEMENT

ಕೇರಳದಲ್ಲಿ ಮುಂದುವರಿದ ಭಾರಿ ಮಳೆ: ಕೋಯಿಕ್ಕೋಡ್‌, ವಯನಾಡ್‌ಗೆ ಆರೆಂಜ್ ಅಲರ್ಟ್

ಪಿಟಿಐ
Published 15 ಆಗಸ್ಟ್ 2024, 12:36 IST
Last Updated 15 ಆಗಸ್ಟ್ 2024, 12:36 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಗುರುವಾರವೂ ಮಳೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎರಡು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ.

ಕೋಯಿಕ್ಕೋಡ್‌ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ದಕ್ಷಿಣ ಕೇರಳ ಕರಾವಳಿಯಲ್ಲಿ ಚಂಡಮಾರುತದಿಂದಾಗಿ ಆಗಸ್ಟ್ 15 ರಿಂದ 19ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ADVERTISEMENT

ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಶುಕ್ರವಾರ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ನೀಡಿದೆ.

ಕೇರಳ, ಲಕ್ಷದ್ವೀಪ ಹಾಗೂ ಕರ್ನಾಟಕದ ಕರಾವಳಿ ಭಾಗದಲ್ಲಿ ಆಗಸ್ಟ್ 15 ರಿಂದ 19 ರವರೆಗೆ ಜೋರಾದ ಗಾಳಿ ಬೀಸುವ ಸಾಧ್ಯತೆಯಿದೆ. ಹಾಗಾಗಿ ಮೀನುಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.