ತಿರುವನಂತಪುರ: ಕೇರಳದಾದ್ಯಂತ ಉತ್ತಮ ಮಳೆಯಾಗುತ್ತಿರುವ ನಡುವೆಯೇ, ಭಾರತೀಯ ಹವಾಮಾನ ಇಲಾಖೆಯು(ಐಎಂಡಿ) ಕೇರಳದ 2 ಜಿಲ್ಲೆಗಳಿಗೆ ಮಂಗಳವಾರ ‘ಆರೆಂಜ್ ಅಲರ್ಟ್’ ಘೋಷಣೆ ಮಾಡಿದೆ.
ಕೇರಳದ ಪಟ್ಟಣಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ 6 ಸೆಂ.ಮೀನಿಂದ 11 ಸೆಂ.ಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಅಲ್ಲದೆ, ರಾಜ್ಯದ ದಕ್ಷಿಣ ಭಾಗದಲ್ಲಿರುವ 8 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ತಿರುವನಂತಪುರ, ಕೊಲ್ಲಂ, ಪಟ್ಟಣಂತಿಟ್ಟ, ಇಡುಕ್ಕಿ, ಪಾಲಕ್ಕಾಡ್, ಮಲಪ್ಪುರಂ ಮತ್ತು ವಯನಾಡು ಭಾಗದ ಒಂದೆರಡು ಸ್ಥಳಗಳಲ್ಲಿ ಅಬ್ಬರದ ಬಿರುಗಾಳಿ–ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇರುವುದಾಗಿಯೂ ಅಂದಾಜಿಸಿದೆ.
ಇದರ ನಡುವೆಯೇ, ಅರಬ್ಬಿ ಸಮುದ್ರದಲ್ಲಿ ಭಾರಿ ಎತ್ತರದ ಅಲೆಗಳು ಏಳಲಿರುವ ಕಾರಣ ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು(ಕೆಎಸ್‌ಡಿಎಂಎ) ಮೀನುಗಾರರು, ಸಮುದ್ರ ತೀರದ ನಿವಾಸಿಗಳು ಹಾಗೂ ಪ್ರವಾಸಿಗರಿಗೆ ನೀರಿಗಿಳಿಯದಂತೆ ಮುನ್ನೆಚ್ಚರಿಕೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.