ADVERTISEMENT

ಕೇರಳ | ಭಾರಿ ಮಳೆ: ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ

ಪಿಟಿಐ
Published 25 ಅಕ್ಟೋಬರ್ 2024, 8:04 IST
Last Updated 25 ಅಕ್ಟೋಬರ್ 2024, 8:04 IST
<div class="paragraphs"><p>ಕೇರಳದಲ್ಲಿ ಭಾರಿ ಮಳೆ</p></div>

ಕೇರಳದಲ್ಲಿ ಭಾರಿ ಮಳೆ

   

ಪಿಟಿಐ ಸಂಗ್ರಹ ಚಿತ್ರ

ತಿರುವನಂತಪುರ: ಕೇರಳದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯದ ಐದು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್‌ ಘೋಷಿಸಿದೆ.

ADVERTISEMENT

ತಿರುವನಂತಪುರ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಹಾಗೂ ರಾಜ್ಯದ ಇತರ ಏಳು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

ತಿರುವನಂತಪುರ, ಕೊಲ್ಲಂ, ಪತ್ತನಂತಿಟ್ಟ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.