ADVERTISEMENT

ಹೇಮಾ ಸಮಿತಿ ವರದಿ: ಕಠಿಣ ಕ್ರಮಕ್ಕೆ ಮಹಿಳಾ ಆಯೋಗದ ಒತ್ತಾಯ

ಪಿಟಿಐ
Published 20 ಆಗಸ್ಟ್ 2024, 6:17 IST
Last Updated 20 ಆಗಸ್ಟ್ 2024, 6:17 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ತಿರುವನಂತಪುರ: ಮಲಯಾಳಂ ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಬಿಡುಗಡೆಯಾಗಿರುವ ಹೇಮಾ ಸಮಿತಿಯ ವರದಿಯಲ್ಲಿನ ಅಂಶಗಳನ್ನು ಗಮನಿಸಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು, ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆಯನ್ನು ಒದಗಿಸಬೇಕು ಎನ್ನುವ ಕೂಗು ಜೋರಾಗಿದೆ.

ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುಡಿಎಫ್, ದೂರುಗಳ ತನಿಖೆಗೆ ಮಹಿಳಾ ಐಪಿಎಸ್ ಅಧಿಕಾರಿಗಳ ತಂಡವನ್ನು ರಚಿಸಬೇಕು ಎಂದು ಆಗ್ರಹಿಸಿದೆ. ಇನ್ನೊಂದೆಡೆ ರಾಜ್ಯ ಮಹಿಳಾ ಆಯೋಗವು ವರದಿಯಲ್ಲಿ ಸೂಚಿಸಲಾದ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಕೋರಿದೆ.

ADVERTISEMENT

ವರದಿಯನ್ನು ಬಿಡುಗಡೆ ಮಾಡಿರುವ ಕ್ರಮವನ್ನು ಸ್ವಾಗತಿಸಿದ ವುಮೆನ್‌ ಇನ್‌ ಸಿನಿಮಾ ಕಲೆಕ್ಟಿವ್‌ (WCC), ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದೆ.

ಚಿತ್ರರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಅಧ್ಯಯನಕ್ಕೆ ಕೇರಳ ಸರ್ಕಾರ 2019ರಲ್ಲಿ ನೇಮಿಸಿದ್ದ ನ್ಯಾ. ಹೇಮಾ ಸಮಿತಿಯ ವರದಿಯು ಸುಮಾರು ಐದು ವರ್ಷಗಳ ಬಳಿಕ ಆರ್‌ಟಿಐ ಕಾಯ್ದೆಯಡಿ ಮಾಧ್ಯಮಗಳಿಗೆ ಲಭ್ಯವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.