ADVERTISEMENT

ಪ್ರಧಾನಿ ಭೇಟಿ ಮಾಡಿದ ಜಾರ್ಖಂಡ್‌ ನಿಯೋಜಿತ ಮುಖ್ಯಮಂತ್ರಿ ಹೇಮಂತ್ ಸೋರೆನ್

ಪಿಟಿಐ
Published 26 ನವೆಂಬರ್ 2024, 13:13 IST
Last Updated 26 ನವೆಂಬರ್ 2024, 13:13 IST
<div class="paragraphs"><p>ಪ್ರಧಾನಿ ಮೋದಿ ಅವರನ್ನು&nbsp;ಭೇಟಿ ಮಾಡಿದ ಜಾರ್ಖಂಡ್‌ ನಿಯೋಜಿತ ಮುಖ್ಯಮಂತ್ರಿ ಹೇಮಂತ್ ಸೋರೆನ್</p></div>

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಜಾರ್ಖಂಡ್‌ ನಿಯೋಜಿತ ಮುಖ್ಯಮಂತ್ರಿ ಹೇಮಂತ್ ಸೋರೆನ್

   

(ಚಿತ್ರ ಕೃಪೆ– @PMOIndia)

ನವದೆಹಲಿ: ಜಾರ್ಖಂಡ್‌ನ ನಿಯೋಜಿತ ಮುಖ್ಯಮಂತ್ರಿ ಹೇಮಂತ್ ಸೊರೇನ್‌ ಅವರು ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾದರು.

ADVERTISEMENT

ಸೊರೇನ್ ಹಾಗೂ ಮೋದಿ ಭೇಟಿ ಸಂದರ್ಭದಲ್ಲಿ ತೆಗೆದ ಪೋಟೊಗಳನ್ನು ಪ್ರಧಾನಿ ಕಾರ್ಯಾಲಯ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿದೆ.

ಜಾರ್ಖಂಡ್ ವಿಧಾನಸಭೆ ಚುನಾವಣಾ ಗೆಲುವಿನ ನಂತರ ಮೊದಲ ಬಾರಿಗೆ ದೆಹಲಿಗೆ ಭೇಟಿ ನೀಡಿದ ಸೊರೇನ್‌ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನೂ ಭೇಟಿ ಮಾಡಿದ್ದಾರೆ.

'ಜಾರ್ಖಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟದ ಗೆಲುವು ಸಾಮಾಜಿಕ ನ್ಯಾಯದ ವಿಜಯವಾಗಿದೆ. ಹೇಮಂತ್ ಸೊರೇನ್‌ ಹಾಗೂ ಕಲ್ಪನಾ ಸೊರೇನ್‌ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅಲ್ಲದೇ ಈ ಗೆಲುವಿಗೆ ಕಾರಣರಾದ ಜನತೆ ಹಾಗೂ ಮೈತ್ರಿಕೂಟದ ಎಲ್ಲಾ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು' ಎಂದು ಮಲ್ಲಿಕಾರ್ಜುನ ಖರ್ಗೆ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ನ. 28ರಂದು ಪ್ರಮಾಣ:

ಸೊರೇನ್‌ ಅವರು ನ. 28ರಂದು ನಾಲ್ಕನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಂಚಿಯ ಮೊರಾಬಾಡಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಇಂಡಿಯಾ ಮೈತ್ರಿಕೂಟದ ಎಲ್ಲ ಪ್ರಮುಖ ನಾಯಕರನ್ನು ಆಹ್ವಾನಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.