ರಾಂಚಿ: ಜಾರ್ಖಂಡ್‌ರಾಜ್ಯದ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಅವರು ಭಾನುವಾರ ಪ್ರಮಾಣವಚನ ಸ್ವೀಕರಿಸಿದರು.
ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ಸಮಾರಂಭದಲ್ಲಿ ಕಾಂಗ್ರೆಸ್, ಆರ್‌ಜೆಡಿ ನಾಯಕರು ಸೇರಿದಂತೆ ಹಲವು ಪಕ್ಷಗಳ ಮುಖ್ಯಸ್ಥರು ಭಾಗಿಯಾಗಿದ್ದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಿಪಿಎಂ ಮುಖಂಡ ಸೀತಾರಾಂ ಯೆಚೂರಿ, ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ಡಿಎಂಕೆ ಮುಖಂಡಎಂ.ಕೆ ಸ್ಟಾಲಿನ್ ಸೇರಿದಂತೆ ಹಲವು ನಾಯಕರು ಸೊರೇನ್ ಪ್ರಮಾಣವಚನ ಸಮಾರಂಭದಲ್ಲಿ ಹಾಜರಿದ್ದರು.
ಈ ಸಂದರ್ಭದಲ್ಲಿ ಜೆಎಂಎಂನ ಮಿತ್ರ ಪಕ್ಷಗಳಾದ ಕಾಂಗ್ರೆಸ್ ಮತ್ತು ಆರ್‌ಜೆಡಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.