ADVERTISEMENT

ಜಾರ್ಖಂಡ್‌ | ಸೀಟು ಹಂಚಿಕೆ ಕುರಿತು ಒಮ್ಮತ: ತೇಜಸ್ವಿ ಯಾದವ್

ಪಿಟಿಐ
Published 22 ಅಕ್ಟೋಬರ್ 2024, 16:25 IST
Last Updated 22 ಅಕ್ಟೋಬರ್ 2024, 16:25 IST
ತೇಜಸ್ವಿ ಯಾದವ್
ತೇಜಸ್ವಿ ಯಾದವ್   

ರಾಂಚಿ: ಜಾರ್ಖಂಡ್‌ ವಿಧಾನಸಭೆ ಚುನಾವಣೆಗೆ ಸೀಟು ಹಂಚಿಕೆಗಳ ವಿಚಾರವಾಗಿ ‘ಇಂಡಿಯಾ’ ಮೈತ್ರಿಕೂಟದ ಅಂಗಪಕ್ಷಗಳಲ್ಲಿ ಒಮ್ಮತ ಮೂಡಿದೆ. ಹೇಮಂತ ಸೊರೇನ್‌ ಅವರೇ ಮತ್ತೆ ಮುಖ್ಯಮಂತ್ರಿ ಆಗುವರು ಎಂದು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಮಂಗಳವಾರ ಹೇಳಿದ್ದಾರೆ.

‘ತೇಜಸ್ವಿ ಯಾದವ್‌, ಮುಖ್ಯಮಂತ್ರಿ ಹೇಮಂತ ಸೊರೇನ್‌ ಅವರನ್ನು ಮೂರು ಬಾರಿ ಭೇಟಿ ಮಾಡಿದ್ದರೂ, ತಮ್ಮ ಪಕ್ಷಕ್ಕೆ ಸಾಕಷ್ಟು ಸೀಟುಗಳನ್ನು ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅವರಿಗೆ ಇಂಡಿಯಾ ಮೈತ್ರಿಕೂಟದಲ್ಲಿ ಯಾವುದೇ ‘ಬ್ರ್ಯಾಂಡ್‌ ಮೌಲ್ಯ‘ ಇಲ್ಲ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿದ ಬೆನ್ನಲ್ಲೇ ತೇಜಸ್ವಿ ಯಾದವ್‌ ಅವರಿಂದ ಈ ಮಾತು ಹೊರಬಿದ್ದಿದೆ.

‘ಮೈತ್ರಿಕೂಟ ಒಗ್ಗಟ್ಟಾಗಿದೆ. ಎಲ್ಲ ಪಕ್ಷಗಳು ಒಟ್ಟಾಗಿ ಚುನಾವಣೆಗಳನ್ನು ಎದುರಿಸಲಿವೆ. ಸೀಟುಗಳ ಹಂಚಿಕೆ ಕುರಿತು ಒಮ್ಮತ ಮೂಡಿದ್ದು, ಶೀಘ್ರವೇ ಘೋಷಣೆ ಮಾಡಲಾಗುತ್ತದೆ’ ಎಂದು ಹೇಳಿದ್ದಾರೆ.

ADVERTISEMENT

‘ಬಿಜೆಪಿಯು ಜಾರ್ಖಂಡ್‌ ಅನ್ನು ಹಾಳು ಮಾಡಿದೆ. ಅದು ಸಂವಿಧಾನ ಮತ್ತು ಮೀಸಲಾತಿ ವಿರೋಧಿ’ ಎಂದೂ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.