ರಾಂಚಿ: ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಇಂದು ( ಸೋಮವಾರ) ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಅಭ್ಯರ್ಥಿಯಾಗಿ ರಾಜ್ಯದ ಗಾಂಡೇಯ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಗಿರಿಡೀಹ್ ಜಿಲ್ಲೆಯಲ್ಲಿನ ಈ ಕ್ಷೇತ್ರದ ಶಾಸಕ ಸ್ಥಾನವು ಜೆಎಂಎಂ ಶಾಸಕ ಸರ್ಫರಾಜ್ ಅಹಮದ್ ಅವರ ರಾಜೀನಾಮೆಯಿಂದಾಗಿ ತೆರವಾಗಿದೆ. ಈ ಕ್ಷೇತ್ರದಲ್ಲಿ ಮೇ 20ರಂದು ಉಪ ಚುನಾವಣೆ ನಡೆಯಲಿದೆ.
ನಾಮಪತ್ರ ಸಲ್ಲಿಸುವ ವೇಳೆ ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಹಾಗೂ ಇತರರು ಜತೆಗಿದ್ದರು.
48 ವರ್ಷದ ಕಲ್ಪನಾ ಅವರು, ಎಂಟೆಕ್ ಮತ್ತು ಎಂಬಿಎ ಪದವಿ ಪಡೆದಿದ್ದಾರೆ.
ಜನವರಿ 31ರಂದು ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಹೇಮಂತ್ ಸೋರೆನ್ ಅವರನ್ನು ಬಂಧಿಸಿತ್ತು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.