ADVERTISEMENT

ಗುಜರಾತ್‌ | ಮೀನುಗಾರಿಕಾ ದೋಣಿಯಲ್ಲಿದ್ದ ₹350 ಕೋಟಿ ಮೌಲ್ಯದ ಹೆರಾಯಿನ್‌ ವಶ

ಪಿಟಿಐ
Published 23 ಫೆಬ್ರುವರಿ 2024, 9:52 IST
Last Updated 23 ಫೆಬ್ರುವರಿ 2024, 9:52 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ವೆರಾವಲ್‌: ಗುಜರಾತ್‌ನ ಗಿರ್‌ ಸೋಮನಾಥ ಜಿಲ್ಲೆಯ ವೆರಾವಲ್‌ ಬಂದರು ಬಳಿ ಮೀನುಗಾರಿಕಾ ದೋಣಿಯಲ್ಲಿ ಸುಮಾರು ₹350 ಕೋಟಿ ಮೌಲ್ಯದ ಹೆರಾಯಿನ್‌ ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿನ್ನೆ (ಗುರುವಾರ) ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಹೆಚ್ಚಿನ ಪ್ರಮಾಣದ ಸೈಕೋಟ್ರೋಪಿಕ್‌ ಡ್ರಗ್‌ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

‘ನಿಖರ ಮಾಹಿತಿ ಮೇರೆಗೆ, ನಮ್ಮ ತಂಡಗಳು ವೆರಾವಲ್‌ ಬಂದರಿನ ಬಳಿ ಮೀನುಗಾರಿಕಾ ದೋಣಿಯೊಂದರ ಮೇಲೆ ದಾಳಿ ನಡೆಸಿದವು. ಈ ವೇಳೆ 50 ಕೆ.ಜಿ ಹೆರಾಯಿನ್‌ ಅನ್ನು ವಶಪಡಿಸಿಕೊಳ್ಳಲಾಗಿದೆ. ಡ್ರಗ್‌ ಮೂಲದ ಕುರಿತು ತನಿಖೆ ನಡೆಸಲಾಗುತ್ತಿದೆ. ದೋಣಿಯಲ್ಲಿದ್ದ ಒಂಬತ್ತು ಮಂದಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಮನೋಹರಸಿನ್ಹಾ ಜಡೇಜಾ ತಿಳಿಸಿದ್ದಾರೆ.

ADVERTISEMENT

ಪ್ರಕರಣ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಗೃಹ ಸಚಿವ ಹರ್ಷ ಸಾಂಘವಿ, ‘ವಶಪಡಿಸಿಕೊಂಡಿರುವ ಕಳ್ಳಸಾಗಾಣಿಕೆಯ ಮಾದಕ ವಸ್ತುವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು ₹350 ಮೌಲ್ಯದ್ದಾಗಿದೆ. ಮಾದಕ ವಸ್ತುಗಳ ವಿರುದ್ಧದ ನಮ್ಮ ಅಭಿಯಾನದಲ್ಲಿ ಮತ್ತೊಂದು ಯಶಸ್ಸು ದೊರಕಿದೆ’ ಎಂದು ಹೇಳಿದ್ದಾರೆ.

ಡ್ರಗ್ಸ್‌ ದಂಧೆಯ ವಿರುದ್ಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಗಿರ್‌ ಸೋಮನಾಥ ಪೊಲೀಸರನ್ನು ಸಚಿವ ಸಾಂಘವಿ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.