ನವದೆಹಲಿ: ನೇಮಕಾತಿಯ ಮೂಲದ ಆಧಾರದ ಮೇಲೆ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ವೇತನದಲ್ಲಿ ತಾರತಮ್ಯ ಎಸಗುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ಜಿಲ್ಲಾ ನ್ಯಾಯಾಲಯಗಳಿಂದ ನೇಮಕ ಮಾಡುವ ಜೊತೆಗೆ, ವಕೀಲರ ಸಂಘಗಳಿಂದಲೂ ಪದೋನ್ನತಿ ನೀಡಿ ನೇಮಕ ಮಾಡಲಾಗುತ್ತದೆ.
ನೇಮಕಾತಿ ಆಧಾರತದಲ್ಲಿ ವೇತನದಲ್ಲಿ ತಾರತಮ್ಯ ಮಾಡುವುದು ಏಕರೂಪತೆಯ ಪ್ರಜ್ಞೆಗೆ ವಿರುದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಪಟ್ನಾ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ವೇತನದಲ್ಲಿ ತಾರತಮ್ಯವಾಗಿದೆ ಎಂದು ಕೋರಿದ್ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಮಾತು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.