ನವದೆಹಲಿ:ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುವ ಸಂವಿಧಾನದ 370ನೇ ವಿಧಿ ರದ್ದತಿ ನಿಲುವಳಿಯನ್ನು ಗೃಹ ಸಚಿವ ಅಮಿತ್ ಶಾ ಮಂಡಿಸಿದ ಬಳಿಕರಾಜ್ಯಸಭೆಯಲ್ಲಿ ಕೋಲಾಹಲದ ವಾತಾವರಣ ಸೃಷ್ಟಿಯಾಯಿತು.
ನಿಲುವಳಿ ವಿರೋಧಿಸಿದಪಿಡಿಪಿ ಸದಸ್ಯ ಮೀರ್ ಮೊಹಮದ್ ಫಯಾಜ್ ಸಂವಿಧಾನದ ಪ್ರತಿಯನ್ನು ರಾಜ್ಯಸಭೆಯಲ್ಲಿ ಹರಿದು ಹಾಕಿದರು. ಕೂಡಲೇ ಕ್ರಮ ಕೈಗೊಂಡಸಭಾಧ್ಯಕ್ಷ ವೆಂಕಯ್ಯ ನಾಯ್ಡು,‘ನೀವು ಸದನದಿಂದ ಹೊರಗೆ ಹೋಗಿ’ ಎಂದುಫಯಾಜ್ ಅವರನ್ನು ಹೊರ ಕಳುಹಿಸಿದರು.
ಸಂವಿಧಾನದ ಪ್ರತಿಯನ್ನು ಹರಿದುಹಾಕಿದ ಪಿಡಿಪಿ ಸದಸ್ಯರ ಕ್ರಮವನ್ನು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಖಂಡಿಸಿದ್ದಾರೆ. ಜತೆಗೆ,ಬಿಜೆಪಿ ಸಂವಿಧಾನದ ಕೊಲೆ ಮಾಡಿದೆ ಎಂದೂ ಆರೋಪಿಸಿದ್ದಾರೆ.
ಬಿಎಸ್‌ಪಿ, ಎಐಎಡಿಎಂಕೆ, ಬಿಜೆಡಿ ಬೆಂಬಲ
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದುಪಡಿಸುವ ಪ್ರಸ್ತಾವಕ್ಕೆ ನಮ್ಮ ಬೆಂಬಲವಿದೆ. ಈ ಮಸೂದೆಗೆ ಸದನದ ಅಂಗೀಕಾರ ಸಿಗಬೇಕು ಎಂದು ರಾಜ್ಯಸಭೆಯಲ್ಲಿ ಬಿಎಸ್‌ಪಿ ನಾಯಕ ಸತೀಶ್ ಚಂದ್ರ ಮಿಶ್ರಾ ಹೇಳಿದರು.ಪ್ರಾದೇಶಿಕ ಪಕ್ಷಗಳಾದ ತಮಿಳುನಾಡಿನ ಎಐಎಡಿಎಂಕೆ ಮತ್ತು ಒಡಿಶಾದ ಬಿಜೆಡಿ ಸಹ ಬೆಂಬಲ ಸೂಚಿಸಿದೆ.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.