ADVERTISEMENT

Covid-19 India Update: 24 ಗಂಟೆಗಳಲ್ಲಿ ಕೋವಿಡ್ ದೃಢಪಟ್ಟ ಪ್ರಕರಣಗಳು 45,720

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಜುಲೈ 2020, 4:28 IST
Last Updated 23 ಜುಲೈ 2020, 4:28 IST
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ   

ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 45,720 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 12 ಲಕ್ಷ ದಾಟಿದೆ.

ಇದೇ ಅವಧಿಯಲ್ಲಿ ಸೋಂಕಿನಿಂದ ದೇಶದಾದ್ಯಂತ 1,129 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನದಲ್ಲಿ ಅತಿ ಹೆಚ್ಚು ಹೊಸ ಪ್ರಕರಗಳು ದಾಖಲಾಗಿವೆ. ಪ್ರಸ್ತುತ ದೇಶದಲ್ಲಿ 4,26,167 ಸಕ್ರಿಯ ಪ್ರಕರಣಗಳಿದ್ದು, 7,82,606 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ ದೇಶದಲ್ಲಿ ಒಟ್ಟು 12,38,635 ಕೋವಿಡ್‌ ಪ್ರಕರಣಗಳು ದಾಖಲಾಗಿವೆ ಹಾಗೂ 29,861 ಮಂದಿ ಸೋಂಕಿನ ಕಾರಣಗಳಿಂದ ಮೃತಪಟ್ಟಿದ್ದಾರೆ.

ADVERTISEMENT

ಜುಲೈ 22ರ ವರೆಗೂ 1,50,75,369 ಮಾದರಿಗಳ ಪರೀಕ್ಷೆ ನಡೆಸಿರುವುದಾಗಿ ಐಸಿಎಂಆರ್‌ ಹೇಳಿದೆ. ಬುಧವಾರ ಒಂದೇ ದಿನ 3,50,823 ಮಾದರಿಗಳ ಪರೀಕ್ಷೆ ನಡೆದಿದೆ.

ಮಹಾರಾಷ್ಟ್ರದಲ್ಲಿ 1,37,282 ಸಕ್ರಿಯ ಪ್ರಕರಣಗಳಿದ್ದು, 1,87,769 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 3,37,607 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಿವೆ. ಇದುವರೆಗೆ 12,556 ಮಂದಿ ಮೃತಪಟ್ಟಿದ್ದಾರೆ. ರಾಜಧಾನಿ ದೆಹಲಿಯಲ್ಲಿ 14,954 ಸಕ್ರಿಯ ಪ್ರಕರಣಗಳಿದ್ದು, 1,07,650 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,26,323 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಿವೆ. ಇದುವರೆಗೆ 3,719 ಮಂದಿ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ 51,765 ಸಕ್ರಿಯ ಪ್ರಕರಣಗಳಿದ್ದು, 1,31,583 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,86,492 ಕೋವಿಡ್‌ ಪ್ರಕರಣಗಳ ಪೈಕಿ 3,144 ಮಂದಿ ಸಾವಿಗೀಡಾಗಿದ್ದಾರೆ.

ಕರ್ನಾಟಕದಲ್ಲಿ 47,075 ಸಕ್ರಿಯ ಪ್ರಕರಣಗಳಿವೆ. ಈಗಾಗಲೇ 27,239 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 1,519 ಮಂದಿ ಸಾವಿಗೀಡಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 75,833 ಕೋವಿಡ್‌ ಪ್ರಕರಣಗಳು ದಾಖಲಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.