ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಮೇಲಾಟಗಳ ನಡುವೆಯೇ ಲೋಕೋಪಯೋಗಿ ಸಚಿವ ವಿಕ್ರಮಾದಿತ್ಯ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಶಾಸಕರು ಅಡ್ಡ ಮತದಾನ ಮಾಡಿದ ನಂತರ ಬಿಜೆಪಿ ಅಭ್ಯರ್ಥಿಗೆ ಗೆಲುವಾಗಿತ್ತು. ಆ ಬಳಿಕ, ಅನಿರೀಕ್ಷಿತ ಬೆಳವಣಿಗೆಯಲ್ಲಿ ಸರ್ಕಾರದ ಅಸ್ತಿತ್ವಕ್ಕೆ ಆತಂಕ ಎದುರಾಗಿದ್ದು, ಅತೃಪ್ತ ಶಾಸಕರಿಗೆ ಹುದ್ದೆ ನೀಡುವ ಮೂಲಕ ಸರ್ಕಾರದ ಉಳಿವಿಗೆ ಸಚಿವರು ಮುಂದಾಗಿದ್ದಾರೆ.
ಶಿಮ್ಲಾ ಗ್ರಾಮೀಣ ಕ್ಷೇತ್ರದ ಶಾಸಕರಾಗಿರುವ ವಿಕ್ರಮಾದಿತ್ಯ ಸಿಂಗ್, ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ.
ಈ ನಡುವೆ ಹರಿಯಾಣದ ಪಂಚಕುಲದಲ್ಲಿ ಬೀಡುಬಿಟ್ಟಿದ್ದ ಹಿಮಾಚಲ ಪ್ರದೇಶದ 6 ಮಂದಿ ಅತೃಪ್ತ ಕಾಂಗ್ರೆಸ್ ಶಾಸಕರು ಬುಧವಾರ ಹೆಲಿಕಾಪ್ಟರ್ ಮೂಲಕ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ.
ಕಳೆದ ರಾತ್ರಿ ಪಂಚಕುಲದ ಹೋಟೆಲ್‌ನಲ್ಲಿ ತಂಗಿದ್ದ ರಾಜೀಂದರ್ ರಾಣಾ ಮತ್ತು ರವಿ ಠಾಕೂರ್ ಸೇರಿದಂತೆ 6 ಶಾಸಕರು, ತೌ ದೇವಿ ಲಾಲ್ ಕ್ರೀಡಾಂಗಣದಿಂದ ಬೆಳ್ಳಂಬೆಳಿಗ್ಗೆ ಹೆಲಿಕಾಪ್ಟರ್‌ನಲ್ಲಿ ತೆರಳಿದ್ದಾರೆ.
ನಿನ್ನೆ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಳಿಕ ಶಾಸಕರು ಶಿಮ್ಲಾದಿಂದ ಹರಿಯಾಣಕ್ಕೆ ದೌಡಾಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.