ADVERTISEMENT

Hindi Diwas - ಹಿಂದಿ ದಿನದ ಶುಭಾಶಯ ಕೋರಿದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಸೆಪ್ಟೆಂಬರ್ 2021, 4:53 IST
Last Updated 14 ಸೆಪ್ಟೆಂಬರ್ 2021, 4:53 IST
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (ಪಿಟಿಐ ಸಂಗ್ರಹ ಚಿತ್ರ)
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (ಪಿಟಿಐ ಸಂಗ್ರಹ ಚಿತ್ರ)   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದ ಜನತೆಗೆ ‘ಹಿಂದಿ ದಿನ’ದ ಶುಭಾಶಯ ಕೋರಿದ್ದಾರೆ.

‘ನಿಮಗೆಲ್ಲರಿಗೂ ‘ಹಿಂದಿ ದಿವಸ’ ಹಬ್ಬದ ಶುಭಾಶಯಗಳು. ಹಿಂದಿಯನ್ನು ಸಮರ್ಥ ಭಾಷೆಯನ್ನಾಗಿಸುವಲ್ಲಿ ವಿವಿಧ ಪ್ರದೇಶಗಳ ಜನರು ಗಮನಾರ್ಹ ಪಾತ್ರ ವಹಿಸಿದ್ದಾರೆ. ಹಿಂದಿ ಭಾಷೆಯು ಜಾಗತಿಕ ವೇದಿಕೆಯಲ್ಲಿ ಬಲವಾದ ಗುರುತು ಮೂಡಿಸುತ್ತಿರುವುದು ನಿಮ್ಮ ಎಲ್ಲ ಪ್ರಯತ್ನಗಳ ಫಲಿತಾಂಶವಾಗಿದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ಭಾವನೆಗಳನ್ನು ವ್ಯಕ್ತಪಡಿಸಲು ಭಾಷೆ ಅತ್ಯಂತ ಶಕ್ತಿಶಾಲಿ ಮಾಧ್ಯಮವಾಗಿದೆ. ನಮ್ಮ ಸಾಂಸ್ಕೃತಿಕ ಪ್ರಜ್ಞೆ ಮತ್ತು ರಾಷ್ಟ್ರೀಯ ಏಕತೆಯ ಮೂಲ ಆಧಾರವಾಗಿರುವ ಹಿಂದಿಯು ಪ್ರಾಚೀನ ನಾಗರೀಕತೆ ಮತ್ತು ಆಧುನಿಕ ಪ್ರಗತಿಯ ನಡುವಿನ ಸೇತುವೆಯಾಗಿದೆ. ಮೋದಿಯವರ ನಾಯಕತ್ವದಲ್ಲಿ ನಾವು ಹಿಂದಿ ಮತ್ತು ಎಲ್ಲ ಭಾರತೀಯ ಭಾಷೆಗಳ ಸಮಾನಾಂತರ ಅಭಿವೃದ್ಧಿಗೆ ನಿರಂತರವಾಗಿ ಬದ್ಧರಾಗಿದ್ದೇವೆ’ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

‘ಹಿಂದಿ ದಿವಸದ ಈ ಸಂದರ್ಭದಲ್ಲಿ, ಎಲ್ಲ ದೇಶವಾಸಿಗಳು ತಮ್ಮ ಮಾತೃಭಾಷೆಯೊಂದಿಗೆ ಅಧಿಕೃತ ಭಾಷೆಯಾಗಿ ಹಿಂದಿಯನ್ನು ಕ್ರಮೇಣ ಬಳಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕೆಂದು ನಾನು ಮನವಿ ಮಾಡುತ್ತೇನೆ. ಮಾತೃಭಾಷೆ ಮತ್ತು ಅಧಿಕೃತ ಭಾಷೆಯ ಸಮನ್ವಯದಲ್ಲಿ ಭಾರತದ ಪ್ರಗತಿ ಅಡಕವಾಗಿದೆ. ನಿಮಗೆಲ್ಲರಿಗೂ ‘ಹಿಂದಿ ದಿವಸ’ ಹಬ್ಬದ ಶುಭಾಶಯಗಳು’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಶಾ ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.