ನವದೆಹಲಿ: ದೆಹಲಿ ನಗರದ ಬಾಬರ್ ರಸ್ತೆಯ ನಾಮಫಲಕಗಳ ಮೇಲೆ ಹಿಂದೂ ಸೇನಾ ಕಾರ್ಯಕರ್ತರು ‘ಅಯೋಧ್ಯ ಮಾರ್ಗ’ ಎಂಬ ಪೋಸ್ಟರ್‌ಗಳನ್ನು ಅಂಟಿಸಿದ್ದಾರೆ.
ಘಟನೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಪೋಸ್ಟರ್‌ಗಳನ್ನು ತೆರವುಗೊಳಿಸಿದ್ದಾರೆ. ಈ ವಿಡಿಯೊವನ್ನು ಸುದ್ದಿಸಂಸ್ಥೆ ‘ಎಎನ್‌ಐ’ ಎಕ್ಸ್‌ನಲ್ಲಿ ಹಂಚಿಕೊಂಡಿದೆ.
ಸದ್ಯ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.