ಮಾರ್ಚ್ 8: ರಾಮಜನ್ಮಭೂಮಿ– ಬಾಬರಿ ಮಸೀದಿ ವಿವಾದ
ಅಯೋಧ್ಯೆಯ ರಾಮ ಜನ್ಮಭೂಮಿ–ಬಾಬರಿ ಮಸೀದಿ ನಿವೇಶನ ವಿವಾದವನ್ನು ಸಂಧಾನದ ಮೂಲಕ ಪರಿಹರಿಸಲು ಸಾಧ್ಯವಿದೆಯೇ ಎಂಬುದನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಎಫ್.ಎಂ.ಐ. ಖಲೀಫುಲ್ಲಾ ನೇತೃತ್ವದ ಮಧ್ಯಸ್ಥಿಕೆ ಸಮಿತಿಯನ್ನು ಸುಪ್ರೀಂ ಕೋರ್ಟ್ ನೇಮಿಸಿದೆ.
ಸೆಪ್ಟೆಂಬರ್ 5: ಚಿದಂಬರಂಗೆ ನ್ಯಾಯಾಂಗ ಬಂಧನ
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ದೆಹಲಿಯ ವಿಶೇಷ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ಅಕ್ಟೋಬರ್ 3: ಪಾಕ್ ವಿರುದ್ಧ ಭಾರತಕ್ಕೆ ಗೆಲುವು
ನಿಜಾಮರ ಹಣ: ಪಾಕ್ ವಿರುದ್ಧ ಭಾರತಕ್ಕೆ ಗೆಲುವು.7 ದಶಕದಷ್ಟು ಹಳೆಯ ಪ್ರಕರಣವೊಂದರಲ್ಲಿ ಬ್ರಿಟನ್ ಹೈಕೋರ್ಟ್ ಭಾರತದ ಪರವಾಗಿ ತೀರ್ಪು ನೀಡಿದ್ದು, ಪಾಕಿಸ್ತಾನಕ್ಕೆ ಸೋಲಾಗಿದೆ.
ನವೆಂಬರ್ 10: ಅಯೋಧ್ಯೆ ತೀರ್ಪು
ಅಯೋಧ್ಯೆ ವಿವಾದಿತ 2.77 ಎಕರೆ ನಿವೇಶನವು ಸಂಪೂರ್ಣವಾಗಿ ರಾಮಲಲ್ಲಾಗೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠವು ಸರ್ವಾನುಮತದ ತೀರ್ಪು ನೀಡಿತು. ಟ್ರಸ್ಟ್‌ಗೆ ಮಂದಿರ ನಿರ್ಮಾಣದ ಹೊಣೆ
ಡಿಸೆಂಬರ್ 4: ಚಿದಂಬರಂ ಬಿಡುಗಡೆ
ಹಣದ ಅಕ್ರಮ ವರ್ಗಾವಣೆಯ ಆರೋಪದ ಮೇಲೆ ಬಂಧನಕ್ಕೊಳಗಾಗಿ, 105 ದಿನಗಳಿಂದ ತಿಹಾರ್ ಜೈಲಿನಲ್ಲಿದ್ದ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ಡಿಸೆಂಬರ್ 16: ಕುಲದೀಪ್ ಸಿಂಗ್ ಸೆಂಗರ್ ವಿರುದ್ಧ ಆರೋಪ ಸಾಬೀತು
ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಕುಲದೀಪ್ ಸಿಂಗ್ ಸೆಂಗರ್ ವಿರುದ್ಧದ ಅತ್ಯಾಚಾರ ಆರೋಪವು ಸಾಬೀತಾಗಿದೆ ಎಂದು ದೆಹಲಿಯ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿತು. ಪ್ರಕರಣದ ಸಹ ಆರೋಪಿ ಶಶಿ ಸಿಂಗ್ ಅವರನ್ನು ಖುಲಾಸೆಗೊಳಿಸಿದೆ.
ಡಿಸೆಂಬರ್ 20: ಸೆಂಗರ್‌ಗೆ ಜೀವಾವಧಿ ಶಿಕ್ಷೆ
ಉನ್ನಾವ್ ಅತ್ಯಾಚಾರ ಪ್ರಕರಣದ ಅಪರಾಧಿ ಕುಲ್‌ದೀಪ್‌ಸಿಂಗ್ ಸೆಂಗರ್‌ಗೆ ಜೀವಾವಧಿ ಶಿಕ್ಷೆ ಹಾಗೂ ₹ 25 ಲಕ್ಷ ದಂಡ ವಿಧಿಸಿ ದೆಹಲಿ ನ್ಯಾಯಾಲಯವು ತೀರ್ಪು ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.