ಅಯೋಧ್ಯೆ: ಹೋಳಿ ಹಬ್ಬದ ಪ್ರಯುಕ್ತ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಸೋಮವಾರ ರಂಗೋತ್ಸವವನ್ನು ಆಚರಿಸಲಾಗಿದೆ.
ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಬಾಲರಾಮನ ದರ್ಶನ ಪಡೆದರು. ರಾಮಜನ್ಮಭೂಮಿಯಲ್ಲಿ ಭಕ್ತಿ ಗೀತೆಗಳನ್ನು ಹಾಡಿ ಸಂಭ್ರಮದಿಂದ ಹೋಳಿಯನ್ನು ಆಚರಿಸಿದರು.
ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾನ ಸಮಾರಂಭದ ನಂತರ ಮೊದಲ ‘ರಂಗಭಾರಿ ಏಕಾದಶಿ’ಯಂದು ಹನುಮಂತನಗರಿ ದೇವಸ್ಥಾನದಲ್ಲಿ ದೇವರಿಗೆ ಬಣ್ಣ ಹಚ್ಚುವ ಮೂಲಕ ಬಣ್ಣಗಳ ಹಬ್ಬ ‘ರಂಗೋತ್ಸವ’ವನ್ನು ಪ್ರಾರಂಭ ಮಾಡಲಾಗಿದೆ.
ಉತ್ತರ ಪ್ರದೇಶದ ಪವಿತ್ರ ನಗರವಾದ ಅಯೋಧ್ಯೆಯಲ್ಲಿ ಈ ವರ್ಷ ಭಗವಾನ್ ಶ್ರೀ ರಾಮನಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಅದ್ಧೂರಿಯಾಗಿ ಹೋಳಿ ಆಚರಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.