ನವದೆಹಲಿ: ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ಮುಂಬೈನಲ್ಲಿ ನಡೆಯಲಿರುವ ರತನ್ ಟಾಟಾ ಅವರ ಅಂತ್ಯಕ್ರಿಯೆಯಲ್ಲಿ ಅಮಿತ್ ಶಾ ಅವರು ಪಾಲ್ಗೊಳ್ಳುವ ಮೂಲಕ ಕೇಂದ್ರ ಸರ್ಕಾರ ಪರವಾಗಿ ಗೌರವ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
21ನೇ ಆಸಿಯಾನ್-ಭಾರತ ಮತ್ತು 19ನೇ ಪೂರ್ವ ಏಷ್ಯಾ ಶೃಂಗಸಭೆಗಳಲ್ಲಿ ಪಾಲ್ಗೊಳ್ಳಲು ಭಾರತ ಪ್ರಧಾನಿ ನರೇಂದ್ರ ಮೋದಿ ಲಾವೋಸ್‌ಗೆ ತೆರಳಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಅಮಿತ್ ಶಾ ಅವರು ಮುಂಬೈಗೆ ತೆರಳಿದ್ದಾರೆ.
‘ಟಾಟಾ ಅವರು ನಿಜವಾದ ರಾಷ್ಟ್ರೀಯತಾವಾದಿ. ಅವರ ನಿಸ್ವಾರ್ಥ ಜೀವನವನ್ನು ರಾಷ್ಟ್ರದ ಅಭಿವೃದ್ಧಿಗೆ ಮುಡಿಪಾಗಿಟ್ಟರು. ಭಾರತ ಮತ್ತು ಜನರ ಕಲ್ಯಾಣಕ್ಕಾಗಿ ಅವರು ತೋರಿದ ಉತ್ಸಾಹ ಮತ್ತು ಬದ್ಧತೆ ಆಗಾಧವಾದ್ದದ್ದು. ಟಾಟಾ ಅವರ ದೂರದೃಷ್ಟಿ ಲಕ್ಷಾಂತರ ಜನರಿಗೆ ದಾರಿದೀಪವಾಗಿದೆ ಎಂದು ಅಮಿತ್ ಶಾ 'ಎಕ್ಸ್' ಪೋಸ್ಟ್‌ನಲ್ಲಿ ಬರೆದಿದ್ದಾರೆ.
ಬುಧವಾರ ಬೆಳಿಗ್ಗೆ ಅವರ ಆರೋಗ್ಯಸ್ಥಿತಿಯಲ್ಲಿ ಏರುಪೇರು ಕಾಣಿಸಿಕೊಂಡ ಕಾರಣ ಅವರನ್ನು ಮುಂಬೈನ ಬ್ರೀಚ್‌ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಸುಮಾರಿಗೆ 11.30 ಗಂಟೆಗೆ ಅವರು ನಿಧನರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.