ಜಂಗೀಪುರ: ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣೆಗೆ ಟಿಎಂಸಿ ಜೊತೆ ಸೀಟು ಹಂಚಿಕೆ ಮಾಡಿಕೊಳ್ಳಲಾಗುವ ವಿಶ್ವಾಸವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ವ್ಯಕ್ತಪಡಿಸಿದ್ದಾರೆ.
ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಅಸಮ್ಮತಿಯ ನಡುವೆಯೂ ಸೀಟು ಹಂಚಿಕೆ ವಿಚಾರದಲ್ಲಿ ಟಿಎಂಸಿಯೊಂದಿಗಿನ ಮೈತ್ರಿಯನ್ನು ಮುಂದುವರಿಸುವ ವಿಶ್ವಾಸವನ್ನು ಕಾಂಗ್ರೆಸ್ ವ್ಯಕ್ತಪಡಿಸಿದೆ.
ಮುರ್ಷಿದಾಬಾದ್ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, ‘2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದೇ ನಮ್ಮ ಗುರಿ’ ಎಂದು ಹೇಳಿದರು
ಮೈತ್ರಿ ಕೂಟದಲ್ಲಿ ಕೊಡು–ಕೊಳ್ಳುವಿಕೆ ಸಾಮಾನ್ಯ. ಎಲ್ಲ ಪಕ್ಷಗಳಿಗೆ ಸಮಾಧಾನವಾಗುವ ರೀತಿಯಲ್ಲಿ ಒಮ್ಮತದಿಂದ ಸೀಟು ಹಂಚಿಕೆ ಮಾಡುವ ವಿಶ್ವಾಸವಿದೆ. ಮಮತಾ ಬ್ಯಾನರ್ಜಿ ಅವರು ಇಂಡಿಯಾ ಮೈತ್ರಿಕೂಟಕ್ಕೆ ತಮ್ಮ ಬದ್ಧತೆಯನ್ನು ತೋರಿದ್ದು, ಅವರ ನಿಲುವನ್ನು ನಾವು ಸ್ವಾಗತಿಸುತ್ತೇವೆ’ ಎಂದರು.
‘ಕಾಂಗ್ರೆಸ್‌ಗೆ ಯಾವುದೇ ಸೀಟು ಬಿಟ್ಟುಕೊಡುವುದಿಲ್ಲ. ಸಿಪಿಐ(ಎಂ) ಜೊತೆಗೂಡಿ ರಾಜ್ಯವನ್ನು ಬಿಜೆಪಿ ಮುಕ್ತಗೊಳಿಸುತ್ತೇವೆ’ ಎಂದು ಮಮತಾ ಬ್ಯಾನರ್ಜಿ ಬುಧವಾರ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದರು. ಆದರೆ ಇದೀಗ ಜೈರಾಮ್ ರಮೇಶ್ ಅವರು ಟಿಎಂಸಿ ಜೊತೆಗೆ ಲೋಕಸಭೆ ಚುನಾವಣೆಯನ್ನು ಎದುರಿಸುವುದಾಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.