ADVERTISEMENT

ನೀಟ್‌, ಜೆಇಇ ಪರೀಕ್ಷೆ: ತಜ್ಞರ ಸಮಿತಿಯಿಂದ ಪರಿಶೀಲನೆ

ಪಿಟಿಐ
Published 2 ಜುಲೈ 2020, 10:55 IST
Last Updated 2 ಜುಲೈ 2020, 10:55 IST
ರಮೇಶ್‌ ಪೋಖ್ರಿಯಾಲ್‌ ನಿಶಾಂಕ್
ರಮೇಶ್‌ ಪೋಖ್ರಿಯಾಲ್‌ ನಿಶಾಂಕ್   

ನವದೆಹಲಿ: ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ರಾಷ್ಟ್ರಮಟ್ಟದಲ್ಲಿ ನಡೆಯುವ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಗಳನ್ನು (ನೀಟ್‌) ನಿಗದಿತ ದಿನಗಳಂದು ನಡೆಸಬೇಕೇ ಎಂಬುದರ ಕುರಿತು ತಜ್ಞರ ಸಮಿತಿ ಪರಾಮರ್ಶಿಸಿ ಶುಕ್ರವಾರ ವರದಿ ಸಲ್ಲಿಸಲಿದೆ ಎಂದು ಮಾನವ ಸಂಪನ್ಮೂಲ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಗುರುವಾರ ತಿಳಿಸಿದ್ದಾರೆ.

ದೇಶವ್ಯಾಪಿ ಕೋವಿಡ್‌– 19 ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ, ಜುಲೈನಲ್ಲಿಈ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಪೋಷಕರು, ವಿದ್ಯಾರ್ಥಿಗಳ ಆತಂಕ ಮತ್ತು ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ತಜ್ಞರ ಸಮಿತಿ ಪರಿಶೀಲನೆ ನಡೆಸಲಿದೆ ಎಂದು ಸಚಿವರು ಹೇಳಿದ್ದಾರೆ.

ಈ ಕುರಿತು ಸಮಗ್ರವಾಗಿ ಪರಮಾರ್ಶಿಸಿ ಶುಕ್ರವಾರದೊಳಗೆ ವರದಿ ನೀಡುವಂತೆರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಮತ್ತು ಇತರ ತಜ್ಞರನ್ನೊಳಗೊಂಡ ಸಮಿತಿಗೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.ಜುಲೈ 18ರಿಂದ 23ರವರೆಗೆ ಜೆಇಇ ಹಾಗೂ ಜುಲೈ 26ರಂದು ನೀಟ್‌ ಪರೀಕ್ಷಾ ದಿನಾಂಕ ನಿಗದಿಯಾಗಿದೆ.

ADVERTISEMENT

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಜುಲೈ 1ರಿಂದ 15ರವರೆಗೆ ನಡೆಯಬೇಕಿದ್ದ 10 ಮತ್ತು 12ನೇ ತರಗತಿಯ ಬಾಕಿ ಪರೀಕ್ಷೆಗಳನ್ನು ಇತ್ತೀಚೆಗಷ್ಟೇ ರದ್ದುಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.