ADVERTISEMENT

ಕೋವಿಡ್–19 | ಡ್ರಗ್‌ ಡಿಸ್ಕವರಿ ಹ್ಯಾಕಥಾನ್‌ಗೆ ಚಾಲನೆ

ಪಿಟಿಐ
Published 2 ಜುಲೈ 2020, 13:58 IST
Last Updated 2 ಜುಲೈ 2020, 13:58 IST
ರಮೇಶ್‌ ಪೋಖ್ರಿಯಾಲ್‌ ನಿಶಾಂಕ್
ರಮೇಶ್‌ ಪೋಖ್ರಿಯಾಲ್‌ ನಿಶಾಂಕ್   
ನವದೆಹಲಿ: ‘ಡ್ರಗ್‌ ಡಿಸ್ಕವರಿ ಹ್ಯಾಕಥಾನ್’ಗೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಹರ್ಷ ವರ್ಧನ್‌ ಮತ್ತುಮಾನವ ಸಂಪನ್ಮೂಲ ಸಚಿವ ರಮೇಶ್‌ ಪೋಖ್ರಿಯಾಲ್‌ ನಿಶಾಂಕ್‌ ಗುರುವಾರ ಚಾಲನೆ ನೀಡಿದರು.

ಕೋವಿಡ್–19 ವಿರುದ್ಧದ ಹೋರಾಟಕ್ಕೆ ಔಷಧ ಕಂಡು ಹಿಡಿಯುವ ಉದ್ದೇಶದಿಂದ ಕಾರ್ಯಾಗಾರ ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಸಂಶೋಧಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ತಿಳಿಸಿದರು.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ,ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (ಸಿಎಸ್‌ಐಆರ್‌) ಜಂಟಿಯಾಗಿ ಈ ಯೋಜನೆಯನ್ನು ಪ್ರಾರಂಭಿಸಿವೆ.

ವಿಡಿಯೋ ಕಾನ್ಫರೆನ್ಸ್‌ ಮೂಲಕ ನಡೆದ ಕಾರ್ಯಕ್ರಮದಲ್ಲಿಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ.ವಿಜಯ ರಾಘವನ್ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.