ADVERTISEMENT

ಕುಪ್ವಾರ ಜಿಲ್ಲೆ: ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಪಿಟಿಐ
Published 29 ಮಾರ್ಚ್ 2021, 5:58 IST
Last Updated 29 ಮಾರ್ಚ್ 2021, 5:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಸಮೀಪದ ಪ್ರದೇಶದಿಂದ ಭದ್ರತಾ ಪಡೆಗಳು ಐದು ಎ.ಕೆ ರೈಫಲ್ಸ್‌ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ಸೇನಾ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

‘ಕರ್ಣಾಹ್‌ದಲ್ಲಿ ನಿಯೋಜಿಸಲಾಗಿರುವ ಭದ್ರತಾ ಪಡೆಗಳು ಭಾನುವಾರ ತಡರಾತ್ರಿ ಈ ಯಶಸ್ವಿ ಕಾರ್ಯಾಚರಣೆ ನಡೆಸಿವೆ. ಸೇನೆ ಮತ್ತು ಪೊಲೀಸ್ ಅಧಿಕಾರಿಗಳ ತೀವ್ರ ನಿಗಾದಿಂದ ಇದು ಸಾಧ್ಯವಾಗಿದೆ‘ ಎಂದು ಅಧಿಕಾರಿ ತಿಳಿಸಿದ್ದಾರೆ.

ಗುಪ್ತಚರ ಇಲಾಖೆಯವರು ನೀಡಿದ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದವು. ಈ ವೇಳೆ ಐದು ಎ.ಕೆ. ರೈಫಲ್ಸ್‌ ಮತ್ತು ಏಳು ಪಿಸ್ತೂಲ್‌ಗಳು, ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಯಿತು ಎಂದು ಅವರು ವಿವರಿಸಿದರು.

ADVERTISEMENT

‘ಪಾಕಿಸ್ತಾನ ಸೇನಾ ನೆಲೆಯ ನಿಗಾದಲ್ಲಿರುವ ಲಿಪ ಕಣಿವೆಯಲ್ಲಿರುವ ಧನ್ನಿ ಗ್ರಾಮದಲ್ಲಿ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಇದು ಗಡಿ ನಿಯಂತ್ರಣ ರೇಖೆಯ ಸಮೀಪದಲ್ಲಿದೆ‘ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.