ಕೋಲ್ಕತ್ತ: ‘ಹಣ ಅಕ್ರಮ ವರ್ಗಾವಣೆ ಆರೋಪದಡಿ ಬಂಧನಕ್ಕೊಳಗಾಗಿರುವ ಅರ್ಪಿತಾ ಮುಖರ್ಜಿ ಅವರ ಮತ್ತೊಂದು ಫ್ಲ್ಯಾಟ್‌ನಲ್ಲಿ ಬುಧವಾರ ಕೋಟ್ಯಂತರ ನಗದು ಪತ್ತೆಯಾಗಿದೆ’ ಎಂದು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆಯಾಗಿರುವ ಅರ್ಪಿತಾ, ದಕ್ಷಿಣ ಕೋಲ್ಕತ್ತದಲ್ಲಿ ಫ್ಲ್ಯಾಟ್ ಹೊಂದಿದ್ದರು. ಜುಲೈ 23ರಂದು ಅದರ ಮೇಲೆ ದಾಳಿ ನಡೆಸಿದ್ದ ಇ.ಡಿ ಅಧಿಕಾರಿಗಳು ₹21 ಕೋಟಿ ನಗದು ಜಪ್ತಿ ಮಾಡಿದ್ದರು.
‘ಕೋಲ್ಕತ್ತದ ಉತ್ತರ ಭಾಗದಲ್ಲಿರುವಬೆಲ್‌ಘರಿಯಾ ವಸತಿ ಸಮುಚ್ಚಯದಲ್ಲೂ ಅರ್ಪಿತಾ ಫ್ಲ್ಯಾಟ್ ಹೊಂದಿದ್ದಾರೆ. ಅದರ ಬೀಗದ ಕೀ ಸಿಗದಿದ್ದರಿಂದ ಅಧಿಕಾರಿಗಳು ಮುಂಬಾಗಿಲು ಒಡೆದು ಒಳಗೆ ನುಗ್ಗಿದ್ದರು. ಅಲ್ಲಿ ಶೋಧ ನಡೆಸಿದಾಗ ನಗದು ಪತ್ತೆಯಾಗಿದೆ. ನೋಟುಗಳ ಎಣಿಕೆಗಾಗಿ ಮೂರು ಯಂತ್ರಗಳನ್ನು ತರಿಸಲಾಗಿದೆ. ಮಹತ್ವದ ದಾಖಲೆಗಳನ್ನೂ ಜಪ್ತಿ ಮಾಡಲಾಗಿದೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.