ಹೈದರಾಬಾದ್: ದೇಶದ ವಿವಿಧ ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶೈಕ್ಷಣಿಕ ಸಂಸ್ಥೆಗಳ ನಕಲಿ ಅಂಕಪಟ್ಟಿ, ಪ್ರಮಾಣಪತ್ರಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಹೈದರಾಬಾದ್ ಪೊಲೀಸರು, ನಾಲ್ವರನ್ನು ಬಂಧಿಸಿದ್ದಾರೆ.
ಮೊಹ್ಮದ್ ಇಂತೆಶಾಮ್ ಉದ್ದೀನ್‌ಹುಸೇನ್ (47), ಮೊಹ್ಮದ್ ಅಬ್ದುಲ್ ಖಾದರ್ (42), ಮೊಹ್ಮದ್ ಅಲ್ತಾಫ್ ಅಹ್ಮದ್ (43) ಹಾಗೂ ಮೊಹ್ಮದ್ ಇಮ್ರಾನ್ (41) ಬಂಧಿತರು. ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಕೇಂದ್ರ ವಲಯದ ಡಿಸಿಪಿ ರಾಜೇಶ್ ಚಂದ್ರ ಗುರುವಾರ ತಿಳಿಸಿದ್ದಾರೆ.
ಬಂಧಿತರಿಂದ ವಿವಿಧ ವಿ.ವಿಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳ ಹೆಸರಿನಲ್ಲಿ ಮುದ್ರಿಸಲಾಗಿರುವ ನಕಲಿ ಪ್ರಮಾಣಪತ್ರಗಳು, ನಾಲ್ಕು ಮೊಬೈಲ್ ಫೋನ್‌ಗಳು, ಒಂದು ಸಿಪಿಯು, ಕಲರ್ ಪ್ರಿಂಟರ್ ಹಾಗೂ ₹ 22 ಸಾವಿರ ನಗದು ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ವಿದೇಶಗಳಲ್ಲಿ ಉನ್ನತ ವ್ಯಾಸಂಗ ಕೈಗೊಳ್ಳುವ ಆಕಾಂಕ್ಷಿಗಳಿಗೆ ಈ ಆರೋಪಿಗಳು ಭಾರಿ ಮೊತ್ತಕ್ಕೆ ನಕಲಿ ಪ್ರಮಾಣಪತ್ರಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.