ADVERTISEMENT

ದಿಶಾ ಪ್ರಕರಣ| ಎನ್‌ಕೌಂಟರ್‌: ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಹೈಕೋರ್ಟ್ ತಡೆ

ಪಿಟಿಐ
Published 7 ಡಿಸೆಂಬರ್ 2019, 2:59 IST
Last Updated 7 ಡಿಸೆಂಬರ್ 2019, 2:59 IST
   

ಹೈದರಾಬಾದ್‌: ಪಶುವೈದ್ಯೆಯ (ದಿಶಾ ಪ್ರಕರಣ)ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ ನಾಲ್ವರು ಆರೋಪಿಗಳನ್ನು ಸೈಬರಾಬಾದ್‌ ಪೊಲೀಸರು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿದ್ದು ಅವರ ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ತೆಲಂಗಾಣ ಹೈಕೋರ್ಟ್‌ ತಡೆ ನೀಡಿದೆ.

ನಾಲ್ವರು ಆರೋಪಿಗಳ ಮೃತದೇಹಗಳನ್ನು ಸೋಮವಾರ ಸಂಜೆ 8 ಗಂಟೆಯವರೆಗೆ ಇರಿಸಿಕೊಳ್ಳಬೇಕು ಎಂದು ತೆಲಂಗಾಣ ಹೈಕೋರ್ಟ್‌ ಹೇಳಿದೆ.

ಮರಣೋತ್ತರ ಪರೀಕ್ಷೆಯನ್ನು ವಿಡಿಯೊ ಚಿತ್ರೀಕರಣ ಮಾಡಬೇಕು. ಇದನ್ನು ಪೆನ್‌ಡ್ರೈವ್‌ನಲ್ಲಿ ಹಾಕಿ ಮೆಹಬೂಬ್‌ನಗರ‍ಪ್ರಧಾನ ಜಿಲ್ಲಾ ನ್ಯಾಯಾಧೀಶರಿಗೆ ಶನಿವಾರ ಸಂಜೆಯೊಳಗೆ ಸಲ್ಲಿಸಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಮೆಹಬೂಬ್‌ನಗರ ಜಿಲ್ಲಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಶುಕ್ರವಾರ ಸಂಜೆಯೇ ನಡೆದಿದೆ. ಈ ಪ್ರಕ್ರಿಯೆಯ ವಿಡಿಯೊ ಚಿತ್ರೀಕರಣವನ್ನು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಾದ ಮೊಹಮ್ಮದ್‌ ಆಲಿ, ಜೊಲ್ಲು ಶಿವ, ಜೊಲ್ಲು ನವೀನ್‌ ಕುಮಾರ್‌, ಚೆನ್ನಕೇಶವಲು ಅವರನ್ನು ಎನ್‌ಕೌಂಟರ್‌ ಮಾಡಲಾಗಿದೆ. ಇವರು ನವೆಂಬರ್‌ 27ರಂದು ಪಶುವೈದ್ಯೆ ಮೇಲೆ ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದರು.

ಸೈಬರಾಬಾದ್‌ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಕಾರ್ಯಾಚರಣೆಗೆ ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.