ಹೈದರಾಬಾದ್: ನಕಲಿ ನೋಟು ಮುದ್ರಣ ಮಾಡಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ತೆಲಂಗಾಣ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಹೈದರಾಬಾದ್ ಪೊಲೀಸ್ ಕಮಿಷನರ್ ಅಂಜನಿ ಕುಮಾರ್ ಕಾರ್ಯಾಚರಣೆಯ ಮಾಹಿತಿ ನೀಡಿದ್ದಾರೆ.
‘ಐದು ಮಂದಿಯನ್ನು ಬಂಧಿಸಲಾಗಿದ್ದು, ₹16 ಲಕ್ಷ ರೂಪಾಯಿ ಮೌಲ್ಯದ ನಕಲಿ ನೋಟುಗಳು ಸೇರಿದಂತೆ ಒಂದು ಲ್ಯಾಪ್‌ಟಾಪ್ ವಶ ಪಡಿಸಿಕೊಳ್ಳಲಾಗಿದೆ. ಜತೆಗೆ, ತನಿಖೆ ಮುಂದುವರಿಸಲಾಗಿದೆ’ ಎಂದಿದ್ದಾರೆ.
ಬಂಧಿತರನ್ನು ಸಂತೋಷ್ ಕುಮಾರ್ (29), ಸಾಯಿ ಕುಮಾರ್ (24), ನೀರಜ್ ಕುಮಾರ್ (21), ರಾಮ್ (20), ಶ್ರೀನಿವಾಸ್ (31) ಎಂದು ಗುರುತಿಸಲಾಗಿದೆ.
‘ಪ್ರಕರಣದ ಪ್ರಮುಖ ಆರೋಪಿ ಸಂತೋಷ್ ಕುಮಾರ್, ಫೋಟೊ ಸ್ಟುಡಿಯೊ ನಡೆಸುತ್ತಿದ್ದು, ಸ್ನೇಹಿತರೊಂದಿಗೆ ಸೇರಿ 500 ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ, ಚಲಾವಣೆ ಮಾಡುತ್ತಿದ್ದ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಮಾಡಿ ಪೊಲೀಸರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.