ADVERTISEMENT

Delhi Elections | ನಾನು ಭ್ರಷ್ಟನಲ್ಲ: ಬಿಜೆಪಿ ವಿರುದ್ಧ ಗುಡುಗಿದ ಕೇಜ್ರಿವಾಲ್

ಪಿಟಿಐ
Published 16 ಅಕ್ಟೋಬರ್ 2024, 10:56 IST
Last Updated 16 ಅಕ್ಟೋಬರ್ 2024, 10:56 IST
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್   

ನವದೆಹಲಿ: ನಾನು ಭ್ರಷ್ಟನಲ್ಲ, ದೆಹಲಿ ಜನರಿಗಾಗಿ ಎಎಪಿ ಸರ್ಕಾರ ಮಾಡುತ್ತಿದ್ದ ಉತ್ತಮ ಕೆಲಸವನ್ನು ಸಹಿಸದ ಬಿಜೆಪಿ, ನನ್ನನ್ನು ಜೈಲಿಗೆ ಕಳುಹಿಸಿತು ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಬುಧವಾರ ಆರೋಪಿಸಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆ 'ಜನ ಸಂಪರ್ಕ' ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟಾಚಾರ ಪ್ರಕರಣಗಳಲ್ಲಿ ನಾಯಕರ ಬಂಧನದ ಹಿಂದಿನ ಸತ್ಯವನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಅಭಿಯಾನ ಆರಂಭಗೊಂಡಿದೆ ಎಂದು ತಿಳಿಸಿದ್ದಾರೆ.

ಎಎಪಿ ಕಾರ್ಯಕರ್ತರು ಈ ಅಭಿಯಾನದ ಪತ್ರಗಳನ್ನು ಪ್ರತಿ ಮನೆ ಮನೆಗೆ ತಲುಪಿಸುವ ಮೂಲಕ ಜನರಿಗೆ ಸತ್ಯವನ್ನು ತಿಳಿಸಲು ಬಯಸುತ್ತೇವೆ. ದೆಹಲಿ ಜನರಿಗೆ ಉತ್ತಮ ಸೌಲಭ್ಯಗಳು ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ಕಂಡು ಕೇಂದ್ರ ಬಿಜೆಪಿ ಸರ್ಕಾರ ಷಡ್ಯಂತ್ರ ರೂಪಿಸಿ ನನ್ನನ್ನು ಐದು ತಿಂಗಳು ಜೈಲಿಗೆ ಕಳುಹಿಸಿತು ಎಂದು ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರು ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಎಎಪಿ ಶಾಸಕರ ಸಭೆ ಬಳಿಕ ಆತಿಶಿ ಅವರನ್ನು ದೆಹಲಿ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.